ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಿತ್ರದುರ್ಗ, ಫೆ.13 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತಗತಿಯ ಅನುಷ್ಠಾನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬರ ಪರಿಹಾರ ಬಿಡುಗಡೆ ಹಾಗೂ ಬೆಳೆ ವಿಮೆಗೆ ಆಗ್ರಹಿಸಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಾಯಕನಹಟ್ಟಿಯಲ್ಲಿ ಮಂಗಳವಾರ ಕರೆ ನೀಡಿದ್ದ ಬಂದ್‍ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
#chitradurga #ಚಿತ್ರದುರ್ಗ pic.twitter.com/nMXX0Fl8nt
— suddione-kannada News (@suddione) February 13, 2024
ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಬಂದ್ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಧ್ವನಿವರ್ಧಕದ ಮೂಲಕ ಮನವಿ ಮಾಡಿದರು. ಬೆಳಿಗ್ಗೆ ಹೂವು, ಹಣ್ಣು, ಸೊಪ್ಪು ತರಕಾರಿ ಮಳಿಗೆ ಸೇರಿ ಪಟ್ಟಣದ ಮುಖ್ಯ ರಸ್ತೆಯ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿವೆ. ವಾಹನ ಸಂಚಾರ ವಿರಳವಾಗಿತ್ರು.
ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿ ಬಂದ್ ಬೆಂಬಲ ಸೂಚಿಸಿದರು.ವಾಲ್ಮೀಕಿ ವೃತ್ತ, ಪಾದಗಟ್ಟೆ, ಹಟ್ಟಿಮಲ್ಲಪ್ಪನಾಯಕ ವೃತ್ತದಲ್ಲಿ ಜಮಾಯಿಸಿ ಘೋಷಣೆ ಕೂಗಿದರು.
ಪ್ರತಿಭಟನಕಾರರರು ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕೆಆರ್‌ಎಸ್ ಪಕ್ಷ, ದಲಿತಸಂಘರ್ಷ ಸಮಿತಿ, ಮಾದಿಗ ಸೇವಾಟ್ ರಸ್ಟ್, ವರ್ತಕರ ಸಂಘ, ಖಾಸಗಿ ಶಾಲೆಗಳ ಒಕ್ಕೂಟ, ಟ್ರಾಕ್ಟರ್ ಮಾಲೀಕರ ಸಂಘ, ಬಸ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಬೆಂಬಲಿಸಿ ಬೀದಿಗಿಳಿದು ಬಂದ್ ಆಚರಿಸಿದರು..