Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಭದ್ರೆಗಾಗಿ ಮುಂದುವರಿದ ರೈತರ ಧರಣಿ | ಕೇಂದ್ರದ ವಿರುದ್ಧ ಪಂಜಿನ ಮೆರವಣಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.14 : ಭದ್ರಾಮೇಲ್ದಂಡೆ ಯೋಜನೆಗೆ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸದ ಕೇಂದ್ರ ಸರ್ಕಾರದ ವಿರುದ್ದ ರೈತರು ಮಂಗಳವಾರ ರಾತ್ರಿ ಗಾಂಧಿವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಿ ದೇಶದ ಪ್ರಧಾನಿ ಮೋದಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿರುವ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಿವಿಧ ಜನಪರ ಸಂಘಟನೆಗಳು ಕಳೆದ ಹದಿನಾಲ್ಕು ದಿನಗಳಿಂದಲೂ ಜಿಲ್ಲಾ ಪಂಚಾಯಿತಿ ಎದುರು ಧರಣಿ ನಡೆಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಮೆಜೆಸ್ಟಿಕ್ ವೃತ್ತದಿಂದ ಗಾಂಧಿವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿ ರೈತ ವಿರೋಧಿ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.


ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಗಾಂಧಿವೃತ್ತದಲ್ಲಿ ಪಂಜಿನ ಮೆರವಣಿಗೆಯನ್ನುದ್ದೇಶಿಸಿ ಮಾತನಾಡುತ್ತ ಕಳೆದ 27 ವರ್ಷಗಳಿಂದಲೂ ಭದ್ರಾಮೇಲ್ದಂಡೆ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಮೇಲೆ ಸವಾರಿ ಮಾಡುತ್ತ ಬರುತ್ತಿವೆಯೇ ವಿನಃ ಹಣ ಮಾತ್ರ ಬಿಡುಗಡೆ ಮಾಡುತ್ತಿಲ್ಲ. ಮಳೆ ಬೆಳೆಯಿಲ್ಲದೆ ಬರಗಾಲಕ್ಕೆ ತುತ್ತಾಗಿರುವ ಚಿತ್ರದುರ್ಗ ಜಿಲ್ಲೆಗೆ ಭದ್ರೆ ನೀರು ಹರಿಯುವತನಕ ಧರಣಿಯಿಂದ ಹಿಂದೆ ಸರಿಯುವುದಿಲ್ಲವೆಂದು ಎಚ್ಚರಿಸಿದರು.

ಹೊಸದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೋರೇಶ್, ಕಾರ್ಯದರ್ಶಿ ಶಶಿಧರ್, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ರೈತ ಮುಖಂಡರುಗಳಾದ ನಿರಂಜನ್, ಮೂಡಲಗಿರಿಯಪ್ಪ, ಈಶ್ವರಪ್ಪ, ಗಿರೀಶ್, ತಿಪ್ಪೇಸ್ವಾಮಿ, ಬಸವರಾಜ್, ಶಿವಣ್ಣ, ವಿಜಯ್, ನಾಗರಾಜ್‍ರೆಡ್ಡಿ, ವರದಪ್ಪ, ಚಿತ್ತಪ್ಪ ಇನ್ನು ಅನೇಕರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!