Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರಗಾಲಕ್ಕೆ ಸಿಲುಕಿರುವ ರೈತರು ಮತ್ತು ಜನಸಾಮಾನ್ಯರನ್ನು ಸಂಕಷ್ಟದಿಂದ ಪಾರು ಮಾಡುವ ಕೆಲಸ ಮಾಡಲಿ | ಕೇಂದ್ರದ ವಿರುದ್ಧ ನಿಲ್ಲದ ರೈತರ ಆಕ್ರೋಶ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.14 : ಭದ್ರಾಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಎದುರು ಕೇಂದ್ರ ಸರ್ಕಾರದ ವಿರುದ್ದ ಕಳೆದ ಹತ್ತು ದಿನಗಳಿಂದ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘ, ಜನಪರ, ಪ್ರಗತಿಪರ, ದಲಿತಪರ ಸಂಘಟನೆಗಳಿಂದ ಚಳ್ಳಕೆರೆ ಗೇಟ್‍ನಲ್ಲಿ ಬುಧವಾರ ಸಾರ್ವಜನಿಕ ಜಾಗೃತಿ ಸಭೆ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಸಭೆಯನ್ನುದ್ದೇಶಿಸಿ ಮಾತನಾಡುತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಿ ಪಾರ್ಲಿಮೆಂಟ್ ಚುನಾವಣೆಯೊಳಗೆ ಜಿಲ್ಲೆಗೆ ಭದ್ರಾಮೇಲ್ದಂಡೆ ಯೋಜನೆಯಿಂದ ನೀರು ಹರಿಸದಿದ್ದರೆ ಹಳ್ಳಿ ಹಳ್ಳಿಗೆ ತಿರುಗಿ ಬಿಜೆಪಿ. ವಿರುದ್ದ ಮತ ಚಲಾಯಿಸುವಂತೆ ಜನತೆಯಲ್ಲಿ ಜಾಗೃತಿ ಮೂಡಿಸಿ ಅಧಿಕಾರದಿಂದ ತೊಲಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.

ಸುಳ್ಳು ಭರವಸೆಗಳನ್ನು ನೀಡಿ ಎರಡನೆ ಬಾರಿಗೆ ದೇಶದ ಪ್ರಧಾನಿಯಾಗಿರುವ ನರೇಂದ್ರಮೋದಿ ಕೈಗೊಂಡ ಹದಿನಾಲ್ಕು ತೀರ್ಮಾನಗಳು ಹುಸಿಯಾಗಿವೆ. ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಗೆ ಲಕ್ಷಾಂತರ ಮಂದಿ ಮನೆ, ಜಮೀನುಗಳನ್ನು ಕಳೆದುಕೊಂಡು ನಿರ್ಗತಿಕರಾದಾಗ ಮಾನವೀಯತೆಯಿಂದಲಾದರು ಪ್ರಧಾನಿ ಬಂದು ಕಷ್ಟ ಕೇಳಲಿಲ್ಲ. ರಾಮನ ಹೆಸರಿನಲ್ಲಿ ರಾಜಕಾರಣ ಮಾಡುವುದನ್ನು ಬಿಟ್ಟು ಬರಗಾಲಕ್ಕೆ ಸಿಲುಕಿರುವ ಚಿತ್ರದುರ್ಗ ಜಿಲ್ಲೆಯ ರೈತರು ಜನಸಾಮಾನ್ಯರನ್ನು ಸಂಕಷ್ಟದಿಂದ ಪಾರು ಮಾಡಲಿ. ಹಿರಿಯೂರಿನ ವಾಣಿವಿಲಾಸ ಸಾಗರಕ್ಕೆ ಭದ್ರೆ ನೀರು ಹರಿಯಬೇಕು.

ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಇವರುಗಳು ಧರಣಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ಕಣ್ಣೊರೆಸುವ ಮಾತುಗಳನ್ನಾಡಿದರೆ ವಿನಃ ಕೇಂದ್ರದಿಂದ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವ  ಯಾವ ಭರವಸೆಯನ್ನು ನೀಡಲಿಲ್ಲ. ಪ್ರಧಾನಿ ಮೋದಿ ಎದುರು ನಿಂತು ಜಿಲ್ಲೆಯ ಸಮಸ್ಯೆಗಳನ್ನು ಮನವರಿಕೆ ಮಾಡುವ ತಾಕತ್ತು ಉಳಿಸಿಕೊಂಡಿಲ್ಲ. ಇಂತಹ ಸಂಸದರುಗಳಿಗೆ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಲಾಗುವುದೆಂದು ಗಡುವು ನೀಡಿದರು.

ಮುತ್ತಿನಕೊಪ್ಪ ಬಳಿ ಫಸ್ಟ್ ಪ್ಯಾಕೇಜ್‍ನಲ್ಲಿ ಎರಡು ಕಡೆ ಲಿಫ್ಟ್ ಕೆಲಸ ನಡೆದಿಲ್ಲ. ಅಬ್ಬಿನಹೊಳೆ ಸಮೀಪ 1.6 ಕಿ.ಮೀ.ನಷ್ಟು ಕಾಲುವೆ ಕೆಲಸ ನಿಂತಿದೆ. ಭೂಮಿ ಕಳೆದುಕೊಳ್ಳುವ ರೈತರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆಂಬ ನೆಪವೊಡ್ಡಿ ಕೆಲಸ ನಿಲ್ಲಿಸುವುದು ಸರಿಯಲ್ಲ. ಇದರಿಂದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ರೈತರ ಬದುಕಿಗೆ ಕೊಳ್ಳಿ ಇಟ್ಟಂತಾಗುತ್ತದೆ. ಯಾವುದೇ ರಾಜಕಾರಣ ಬೆರೆಸುವುದು ಬೇಡ. ತ್ವರಿತವಾಗಿ ಕೆಲಸ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸಬೇಕೆನ್ನುವುದು ನಮ್ಮ ಬೇಡಿಕೆ. ಇದಕ್ಕೆ ಪ್ರತಿಯೊಬ್ಬರ ಬೆಂಬಲ ಅತ್ಯವಶ್ಯಕ ಎಂದು ಈಚಘಟ್ಟದ ಸಿದ್ದವೀರಪ್ಪ ಕೋರಿದರು.

ರೈತ ಮುಖಂಡರುಗಳಾದ ಬಸವರಾಜಪ್ಪ, ರಾಮರೆಡ್ಡಿ, ಬೋರೇಶ್, ಶಶಿಧರ್, ಪ್ರಸನ್ನಕುಮಾರ್, ರಂಗಸ್ವಾಮಿ, ತುಳಜಮ್ಮ, ಬಸವಲಿಂಗಮ್ಮ. ನಾಗತಿಹಳ್ಳಿ ನಿರಂಜನ್. ಅಲೆಮಾರಿ ಅರೆಅಲೆಮಾರಿ ಜನಾಂಗದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಇನ್ನು ಅನೇಕರು ಜಾಗೃತಿ ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಮಹಾರಾಷ್ಟ್ರ ಸಿಎಂ ಸಹಾಯ ತೆಗೆದುಕೊಳ್ಳುತ್ತಿದ್ದಾರಾ..? ಏನಾಗ್ತಿದೆ ರಾಜ್ಯರಾಜಕಾರಣದಲ್ಲಿ..?

ಬೆಳಗಾವಿ: ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆಲ್ಲಿವ ಮೂಲಕ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಅಂದಿನಿಂದಾನು ಬಿಜೆಪಿ ಹಾಗೂ ಜೆಡಿಎಸ್ ನಾಯಕರದ್ದು ಒಂದೇ ವಾಕ್ಯ. ಈ ಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ಬೀಳಲಿದೆ ಎಂದು.

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

error: Content is protected !!