Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ರೈತರನ್ನು ಸ್ಥಳಾಂತರಿಸದೆ ಬಿಡುಗಡೆ ಮಾಡಿ : ಸಿಎಂ ಸಿದ್ದರಾಮಯ್ಯ ಮನವಿ

---Advertisement---

ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ಇತ್ತಿಚೆಗೆ ಪ್ರತಿಭಟನೆ ಮಾಡಲು ಹೊರಟಿದ್ದರು. ಕರ್ನಾಟಕದಿಂದ ಕೂಡ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲು ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿಯೇ ರಯಥರನ್ನು ತಡೆದು, ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು. ಇದೀಗ ವಶದಲ್ಲಿರುವ ರೈತರನ್ನು ವಾರಣಾಸಿಗೆ ಸ್ಥಳಾಂತರ ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಿ, ರೈತರನ್ನು ಬಿಡುಗಡೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

 

‘ಪ್ರತಿಭಟನೆಯಲ್ಲಿ ಭಾಗವಹಿಸಲು ರೈತರು ದೆಹಲಿಗೆ ತೆರಳುತ್ತಿದ್ದರು. ಈ ವೇಳೆ ಯಾವುದೇ ಕಾರಣವಿಲ್ಲದೆ ಕರ್ನಾಟಕದ ರೈತರ ಗುಂಪನ್ನು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಬಂಧಿಸಿದ್ದಾರೆ. ಅಲ್ಲದೆ ರೈತರನ್ನು ಬಂಧಿಸಿ ನಾಲ್ಕು ದಿನಗಳಾದರೂ ಅವರನ್ನು ಬಿಡುಗಡೆ ಮಾಡಿಲ್ಲ. ನಿಮ್ಮ ಪೊಲೀಸ್ ಅಧಿಕಾರಿಗಳು ಅವರನ್ನು ವಾರಣಾಸಿಗೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ದೆಹಲಿಗೆ ತೆರಳುತ್ತಿದ್ದರು. ಇದು ಅವರ ಸಾಂವಿಧಾನಿಕ ಹಕ್ಕು. ಉತ್ತಮ ನೀತಿಗಳನ್ನು ಬಯಸುತ್ತಿರುವ ರೈತರನ್ನು ಮಧ್ಯಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ಬಂಧಿಸಿ, ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ‌. ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ, ರೈತರನ್ನು ಸ್ಥಳದಿಂದ ಸ್ಥಳಕ್ಕೆ ಸ್ಥಳಾಂತರಿಸದೆ ಬಿಡುಗಡೆ ಮಾಡಬೇಕು’ ಎಂದು ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಅಧ್ಯಕ್ಷತೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳುತ್ತಿದ್ದರು. ಈ ವೇಳೆ 70ಕ್ಕೂ ರೈತರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶ ಪೊಲೀಸರ ಈ ನಡೆಯನ್ನು ಖಂಡಿಸಿ, ರಾಜ್ಯದಲ್ಲೂ ರೈತರ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment