Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿಯಾದವರು ಎಲ್ಲಾ ರಾಜ್ಯಗಳನ್ನು ಸಮಾನವಾಗಿ ಕಾಣಬೇಕು : ಕೇಂದ್ರ ಸರ್ಕಾರದ ವಿರುದ್ಧ ಜೆ.ಯಾದವರೆಡ್ಡಿ  ಆಕ್ರೋಶ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಪ್ರತಿಭಟನಾಕಾರರನ್ನು ಕೇಂದ್ರ ಸರ್ಕಾರ ಕ್ರಿಮಿನಲ್ ತರ ನೋಡುತ್ತಿರುವುದು ಸರಿಯಲ್ಲ. ದೆಹಲಿಯಲ್ಲಿ ಹದಿಮೂರು ತಿಂಗಳುಗಳ ಕಾಲ ಚಳುವಳಿ ನಡೆಸಿದ ರೈತರ ಮೇಲೆ ಅಶ್ರುವಾಯು, ಜಲಪಿರಂಗಿ ಪ್ರಯೋಗಿಸಿದ ಕೇಂದ್ರ ಸರ್ಕಾರ ರೈತರ ಹಕ್ಕನ್ನು ಧಮನಗೊಳಿಸುವಲ್ಲಿ ಸೋತು ಕೊನೆಗೆ ಮೂರು ಕರಾಳ ಕಾಯಿದೆಗಳನ್ನು ಹಿಂದಕ್ಕೆ ಪಡೆಯಿತು. ಏಳು ನೂರು ರೈತರು ಹುತಾತ್ಮರಾದರು. ಬೆಂಬಲ ಬೆಲೆ ಘೋಷಿಸುವಂತೆ ರೈತರು ಕೇಳುತ್ತಿರುವ ಬೇಡಿಕೆ ನ್ಯಾಯಯುತವಾಗಿದೆ ಎನ್ನುವ ಜ್ಞಾನ ಆಳುವ ಸರ್ಕಾರಗಳಿಗೆ ಇಲ್ಲದಿರುವುದು ನೋವಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಬಲ ಬೆಲೆ ಘೋಷಿಸುವಲ್ಲಿ ಸಮಿತಿ ರಚಿಸುವುದಾಗಿ ಹೇಳಿರುವ ಕೇಂದ್ರ ಸರ್ಕಾರ 38 ಸಭೆಗಳನ್ನು ನಡೆಸಿದೆ. ಇದುವರೆವಿಗೂ ಸಮಿತಿ ರಚಿಸಿಲ್ಲ. ಕಾರ್ಪೊರೇಟ್ ಕುಳಗಳ ಸಾಲ ಮನ್ನ ಮಾಡುವಾಗ ಆರ್ಥಿಕ ಹೊರೆಯಾಗುತ್ತದೆಂಬ ಅರಿವು ಕೇಂದ್ರಕ್ಕೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.

ರೈತರಿಗೆ ಬೆಂಬಲ ಬೆಲೆ ನೀಡಲು ಪ್ರತಿ ವರ್ಷ ಎರಡು ಲಕ್ಷ ಕೋಟಿ ರೂ. ಸಾಕು. ರೈತ ಸಂತಾನ ಉಳಿಯಬೇಕಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ದೇಶದ ಪ್ರಧಾನಿ ನರೇಂದ್ರಮೋದಿ ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಯಾರು ನೆಮ್ಮದಿಯಿಂದ ಬದುಕುತ್ತಿಲ್ಲ. ಕರ್ನಾಟಕಕ್ಕೆ ಪರಮ ಅನ್ಯಾಯವಾಗಿದೆ.

ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕಾಯ್ದಿರಿಸಿರುವ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸಲು ಆಸಕ್ತಿ ತೋರುತ್ತಿಲ್ಲ. ಮೇಕದಾಟು, ಮಹದಾಯಿ, ಕಾವೇರಿ ಕೊಳ್ಳಗಳಿಗೆ ದ್ರೋಹವೆಸಗುತ್ತಿದೆ. ತಾರತಮ್ಯ ಬೇಡ ಪ್ರಧಾನಿಯಾದವರು ಎಲ್ಲಾ ರಾಜ್ಯಗಳನ್ನು ಸಮಾನವಾಗಿ ಕಾಣಬೇಕು ಎಂದು ಒತ್ತಾಯಿಸಿದರು.

ಸಿ.ಐ.ಟಿ.ಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್ ಮಾತನಾಡಿ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿರುವ ದೇಶದ ಪ್ರಧಾನಿ ನರೇಂದ್ರಮೋದಿ ಶ್ರೀಮಂತರ ಮೇಲೆ ತೆರಿಗೆ ಹೆಚ್ಚಿಸಿ ಬಡವರು ಬದುಕಲು ಅವಕಾಶ ಕಲ್ಪಿಸಬೇಕು. ರೈಲ್ವೆ, ವಿದ್ಯುತ್, ವಿಮಾನ ಇವೆಲ್ಲವುಗಳನ್ನು ಖಾಸಗಿಕರಣಗೊಳಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸುವಂತೆ ಆಗ್ರಹಿಸಿದರು.

ಡಾ.ಸ್ವಾಮಿನಾಥನ್ ವರದಿಯಂತೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ರಚಿಸಿ ಕೃಷಿ ಕಾರ್ಮಿಕರಿಗೆ ಸಮಗ್ರ ಕಲ್ಯಾಣ ಯೋಜನೆಗಳನ್ನು ರೂಪಿಸುವಂತೆ ಮನವಿ ಮಾಡಿದರು.
ಎ.ಐ.ಟಿ.ಯು.ಸಿ. ಜಿಲ್ಲಾಧ್ಯಕ್ಷ ರವಿಕುಮಾರ್, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ, ಟಿ.ಆರ್.ಉಮಾಪತಿ, ಅಬ್ದುಲ್ಲಾ, ರಾಘವೇಂದ್ರ, ಕರಿಯಪ್ಪ, ಹೆಚ್.ಮಂಜುನಾಥ, ಆಯಿಷ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!