Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಎಂ.ಸಿ.ರಘುಚಂದನ್‍ಗೆ ಟಿಕೆಟ್ ನೀಡಿ : ಹೊಳಲ್ಕೆರೆ ಯಾದವ ಸಮಾಜ ಒತ್ತಾಯ

---Advertisement---

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.16 : ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೊರಗಿನವರಿಗೆ ಮಣೆ ಹಾಕುವ ಬದಲು ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚಿತ್ರಹಳ್ಳಿ ದೇವರಾಜ್ ಬಿಜೆಪಿ. ನಾಯಕರುಗಳಲ್ಲಿ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರತಿ ಚುನಾವಣೆಯಲ್ಲಿಯೂ ಹೊರಗಿನವರು ಬಂದು ಇಲ್ಲಿಂದ ಗೆದ್ದುಕೊಂಡು ಹೋಗುತ್ತಾರೆ. ನಂತರ ಯಾವುದೇ ಅಭಿವೃದ್ದಿಯಾಗುವುದಿಲ್ಲ. ಅದಕ್ಕಾಗಿ ಈ ಬಾರಿಯ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪನವರ ಪುತ್ರ ಯುವ ಉತ್ಸಾಹಿ ಎಂ.ಸಿ.ರಘುಚಂದನ್‍ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.

ಸದಾ ಬರಗಾಲವನ್ನೆ ಎದುರಿಸಿಕೊಂಡು ಅತ್ಯಂತ ಹಿಂದುಳಿದಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ದಿ ಕಾಣಬೇಕಾಗಿರುವುದರಿಂದ ಪಕ್ಷದ ನಾಯಕರುಗಳು ಹೊರಗಿನವರನ್ನು ಕರೆ ತಂದು ಇಲ್ಲಿ ಚುನಾವಣೆಗೆ ನಿಲ್ಲಿಸುವ ಬದಲು ತಂದೆಯ ಗರಡಿಯಲ್ಲಿ ಪಳಗಿರುವ ಎಂ.ಸಿ.ರಘಚಂದನ್‍ಗೆ ಸಾಕಷ್ಟು ಅನುಭವವಿದೆ ಎನ್ನುವುದನ್ನು ಪರಿಗಣಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಚಿತ್ರಹಳ್ಳಿ ದೇವರಾಜ್ ವಿನಂತಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶೇಖರಪ್ಪ, ಯಾದವ ಸಮಾಜದ ಮುಖಂಡರುಗಳಾದ ಕೃಷ್ಣಮೂರ್ತಿ, ತಿಮ್ಮೇಶ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment