ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 224 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 8678 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 50466 RTPCR ಟೆಸ್ಟ್ ಸೇರಿದಂತೆ ಒಟ್ಟು 59144 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 224 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 148 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 317 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ ಜನ ಕೊರೊನಾದಿಂದಾಗಿ 5 ಜನ ಸಾವನ್ನಪ್ಪಿದ್ದಾರೆ.