Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ರಂಭಾಪುರಿ ಜಗದ್ಗುರು ಕಾರಿಗೆ ಚಪ್ಪಲಿ ಎಸೆದ ಮಹಿಳೆ : ಯಾಕೆ ಗೊತ್ತಾ..?

---Advertisement---

 

ಬಾಗಲಕೋಟೆ: ತಾಲೂಕಿನ ಕಲಾದಗಿ ಗ್ರಾಮಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ತೆರಳಿದ್ದರು. ಈ ವೇಳೆ ಶ್ರೀ ಕಾರಿನ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದಿರುವ ಘಟನೆ ನಡೆದಿದೆ. ಈ ಘಟನೆ ನಡೆದ ಬಳಿಕ ಅಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಪೊಲೀಸರು ಆಗಮಿಸಿ ಸೃಷ್ಟಿಯಾಗಿದ್ದ ವಾತಾವರಣವನ್ನು ತಿಳಿಗೊಳಿಸುವ ಪ್ರಯತ್ನ ನಡೆಸಿದ್ದಾರೆ.

 

ತಾಲೂಕಿನ ಕಲಾದಗಿ ಗ್ರಾಮದಲ್ಲಿ ರಂಭಾಪುರಿ ಜಗದ್ಗುರು ಪೀಠದ ಶಾಖಾ ಮಠವಾದ ಪಂಚಗೃಹ ಗುರುಲಿಂಗೇಶ್ವರ ಮಠವಿದೆ. ಈ ಮಠದ ಪೀಠಾಧಿಪತಿಯ ಆಯ್ಕೆ ಕೋರ್ಟ್ ನಲ್ಲಿದೆ. ಆದರೆ ಮಠದ ಗಂಗಾಧರ ಸ್ವಾಮೀಜಿ ಅವರು ಮಠಕ್ಕೆ‌ ಸಂಬಂಧಿಸಿದ ಕಟ್ಟಡದ ದುರಸ್ತಿ ಕಾರ್ಯ ಹಾಗೂ ಮಠಕ್ಕೆ ಸೇರಿದ ಹೊಲವನ್ನು ಉಳುಮೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇದು ಕೆಲವು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ರಂಭಾಪುರಿ ಶ್ರೀಗಳ ಮೇಲೂ ಪ್ರಭಾವ ಬೀರಿದೆ.

ಜಗದ್ಗುರುಗಳು ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮದಲ್ಲಿ ನಡೆಯಲಿರುವ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ರಂಭಾಪುರಿ ಜಗದ್ಗುರುಗಳು ತೆರಳುತ್ತಿದ್ದ ವಾಹನವನ್ನು ಅಡ್ಡಗಟ್ಟಿ, ಪ್ರತಿಭಟನೆ ನಡೆಸುವ ಪ್ರಯತ್ನ ನಡೆಯಿತು. ಈ ವೇಳೆ ಮಹಿಳೆಯೋರ್ವಳು ರಂಭಾಪುರಿ ಜಗದ್ಗುರುಗಳಿದ್ದ ಕಾರಿನತ್ತ ಚಪ್ಪಲಿ ತೂರಿದ್ದಾಳೆ. ಪರಿಣಾಮ ಸ್ಥಳದಲ್ಲಿ ತಳ್ಳಾಟ, ನೂಕಾಟ ಸಂಭವಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment