ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಮಾರ್ಚ್ 1ರಿಂದ 22ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆದರೆ ಮಾರ್ಚ್ 25ರಿಂದ ಜೂನ್ 6ರ ತನಕ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.

ಈ ವರ್ಷ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















