ಚಿತ್ರದುರ್ಗದಲ್ಲಿ ಫೆಬ್ರವರಿ 26 ರಂದು ಸಂತ ಸೇವಾಲಾಲರ 285 ನೇ ಜಯಂತೋತ್ಸವ ಹಾಗೂ ರುದ್ರಪ್ಪ ಮಾನಪ್ಪ ಲಮಾಣಿಯವರಿಗೆ ಅಭಿನಂದನಾ ಸಮಾರಂಭ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 22 :  ಜಗತ್ತಿಗೆ ಶಾಂತಿ ಸಹಬಾಳ್ವೆ ಸೌಹಾರ್ದತೆಯ ಸಂದೇಶವನ್ನು ಸಾರಿದ ಸಂತ ಸೇವಾಲಾಲರ 285 ನೇ ಜಯಂತೋತ್ಸವ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿಯವರಿಗೆ ಅಭಿನಂದನಾ ಸಮಾರಂಭವು ಫೆ. 26 ರ ಸೋಮವಾರ ನಗರದ ತರಾಸು ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂಜಾರ ಜನ ಜಾಗೃತಿ ಅಭೀಯಾನ ಸಮಿತಿ ಕರ್ನಾಟಕ ಮತ್ತು ಬಂಜಾರ ರಕ್ಷಣಾ ವೇದಿಕೆ ಹಾಗೂ ಬಂಜಾರ ಸಮುದಾಯಗಳ ನೇತೃತ್ವದಲ್ಲಿ ಫೆ. 26ರಂದು ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ 10ಕ್ಕೆ ನಗರದ ನೀಲಕಂಠೇಶ್ವರ ದೇವಾಲಯದಿಂದ ಬೆಳ್ಳಿ ರಥದಲ್ಲಿ ಸೇವಾಲಾಲ್ ರವರ ಭಾವಚಿತ್ರ, ಡಾ.ಬಿ.ಆರ್ ಅಂಬೇಡ್ಕರ್, ಹಾಗೂ ನಾಲ್ವಡಿ ಕೃಷ್ಣರಾಜರ ಭಾವಚಿತ್ರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡದೊಂದಿಗೆ ಮೆರವಣಿಗೆಯನ್ನು ನಡೆಸಲಾಗುವುದು. ನೀಲಕಂಠೇಶ್ವರ ದೇವಾಲಯದಿಂದ ಪ್ರಾರಂಭವಾಗುವ ಮೆರವಣಿಗೆಯೂ ಬಿ.ಡಿ.ರಸ್ತೆ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರವನ್ನು ತಲುಪಲಿದೆ ಎಂದರು.

 

ಜಯಂತೋತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಘುಮೂರ್ತಿ, ಬಿ.ಜೆ.ಗೋವಿಂದಪ್ಪ, ಕೆ.ಸಿ.ವಿರೇಂದ್ರ ಪಪ್ಪಿ, ಕೆ.ಸಿ.ನಾಗರಾಜ್, ಸೇರಿದಂತೆ ಸಮಾಜದ ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭದೆ ಅಧ್ಯಕ್ಷತೆಯನ್ನು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜದ ಮಹಿಳೆಯರಿಂದ ತೀಜ್ ಉತ್ಸವ ಮತ್ತು ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ಬಂಜಾರ ಕಲ್ಚರಲ್ ಫೆಸ್ಟಿವಲ್ ಸಹಾ ನಡೆಯಲಿದೆ ಎಂದು ತಿಳಿಸಿದರು.

ಗೋಷ್ಟಿಯಲ್ಲಿ ಉತ್ಸವ ಸಮಿತಿಯ ಸದಸ್ಯರಾದ ಆರ್.ನಿಂಗಾನಾಯ್ಕ್, ತಿಪ್ಪೇಶ್ ನಾಯ್ಕ್, ಎಲ್.ರಮೇಶ್, ಅನಿಲ್, ಗಣೇಶ್ ನಾಯ್ಕ್, ಚಂದ್ರಾನಾಯ್ಕ್, ಆರ್.ನವೀನ್ ಹಾಗೂ ಡಾ.ಕೆ.ಈಶ್ವರಪ್ಪ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *