Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ನೇಮಕ

---Advertisement---

 

ಸುದ್ದಿಒನ್, ಚಿತ್ರದುರ್ಗ : ಫೆ (22) : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ.

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಶಾಸಕ ಧೀರಜ್ ಮುನಿರಾಜ್ ರವರು ಇಂದು ಬೆಂಗಳೂರಿನಲ್ಲಿ ಅಧಿಕೃತ ನೇಮಕ ಪತ್ರವನ್ನು ನೀಡಿದರು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ, ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು. ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕಾರ್ಯ ನಿರ್ವಹಿಸಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂ ಸಹ   ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment