ಚಿತ್ರದುರ್ಗ.ಫೆ.23: ಫೆ.27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಮೊಳಕಾಲ್ಮೂರು, ಹೊಸದುರ್ಗ ಹಾಗೂ ಹಿರಿಯೂರು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿ,
ಫೆಬ್ರವರಿ 28 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಚಳ್ಳಕೆರೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5:30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರಿ ಯೋಜನೆಗಳನ್ನು ತಲುಪಿಸಲು ಅನಾವಶ್ಯಕ ವಿಳಂಬ, ಕರ್ತವ್ಯ ನಿರ್ಲಕ್ಷತನ, ತಾರತಮ್ಯ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇದ್ದಲ್ಲಿ ನಿಗಧಿತ ನಮೂನೆಯಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















