Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ನೇಹಿತರ ಪಾಲಿನ ಡಿಎಂ ಬಾಸ್ ಇನ್ನಿಲ್ಲ | ನಗರಸಭೆ ಮಾಜಿ ಅಧ್ಯಕ್ಷ ಪೊಲೀಸ್ ಮಲ್ಲಿಕಾರ್ಜುನ್ ನಿಧನ…!

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ, 27: ನಗರಸಭೆ ಮಾಜಿ ಅಧ್ಯಕ್ಷ ಹಾಗೂ 15 ನೇ ವಾರ್ಡಿನ ಹಾಲಿ ಸದಸ್ಯ  ಡಿ.ಮಲ್ಲಿಕಾರ್ಜುನ್ (48) ಅನಾರೋಗ್ಯದಿಂದ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನ ಹೊಂದಿದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಗರದ ಹೊರವಲಯದ ತಮಟಕಲ್ಲು ರಸ್ತೆಯ ಶಿವ ಲೇಔಟ್ ನ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪೊಲೀಸ್ ಮಲ್ಲಿಕಾರ್ಜುನ್ ಎಂದೇ ಖ್ಯಾತಿ ಗಳಿಸಿದ್ದ ಮಲ್ಲಿಕಾರ್ಜುನ್ ಚಿತ್ರದುರ್ಗ ಜಿಲ್ಲೆಯಲ್ಲಿ ವರ್ಣರಂಜಿತ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು.

ಚಿತ್ರದುರ್ಗದಲ್ಲಿ ಎಂಟತ್ತು ವಾರ್ಡ್ ಗಳಲ್ಲಿ ಹಿಡಿತ ಸಾಧಿಸಿದ್ದ ಅವರು ಚಿತ್ರದುರ್ಗದ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು.

ಕುಂಚಿಗನಾಳ್ ಗ್ರಾಮದ ಮೂಲ ನಿವಾಸಿ ಆಗಿದ್ದ ಮಲ್ಲಿಕಾರ್ಜುನ್ ತಂದೆ ಸರ್ಕಾರಿ ಆಸ್ಪತ್ರೆ ಅಂಬುಲೆನ್ಸ್ ಚಾಲಕರಾಗಿದ್ದರು. ಆರ್ಥಿಕವಾಗಿ ಅಷ್ಟಾಗಿ ಸುಭದ್ರವಲ್ಲದ ಕುಟುಂಬದಿಂದ ಬಂದ ಮಲ್ಲಿಕಾರ್ಜುನ್, ಕಲಾ ಕಾಲೇಜಿನಲ್ಲಿ ಪದವಿ ಪಡೆದು ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಓದುವ ದಿನಗಳಲ್ಲಿಯೇ ಕುಸ್ತಿಪಟುವಾಗಿದ್ದ ಮಲ್ಲಿಕಾರ್ಜುನ್ ವಿವಿ ಮಟ್ಟದಲ್ಲಿ ಬೆಳ್ಳಿಪದಕ ಪಡೆದಿದ್ದರು. ಬಳಿಕ ಅನೇಕ ಬಯಲು ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಗೆಲುವಿ ನಗೆ ಬೀರಿದ್ದರು.

ಪೊಲೀಸ್ ಇಲಾಖೆ ಸೇರಿದ ಬಳಿಕವೂ ದೇಹವನ್ನು ಸದೃಢವಾಗಿಟ್ಡುಕೊಳ್ಳುವಲ್ಲಿ ಕಾಳಜಿ ವಹಿಸಿದ್ದರು.

ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲೂ, ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲಿಯೂ, ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಸಮಾಜದಲ್ಲಿಯೂ, ಓರ್ವ ರಾಜಕಾರಣಿಯಾಗಿ ರಾಜಕೀಯ ಕ್ಷೇತ್ರದಲ್ಲೂ ಹೀಗೆ ಪ್ರತಿ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು.

ಗಣಪತಿ ಹಬ್ಬ, ಜಾತ್ರೆ, ಕ್ರೀಡಾಕೂಟ ಸೇರಿದಂತೆ ಅನೇಕ ಜನಪರ, ಧಾರ್ಮಿಕ ಕಾರ್ಯಗಳಿಗೆ ದೇಣಿಗೆ ನೀಡಿ ಜಿಲ್ಲೆಯಲ್ಲಿ ಸ್ನೇಹಿತರ, ಅಭಿಮಾನಿಗಳ ದೊಡ್ಡ ಪಡೆಯನ್ನೇ ಕಟ್ಡಿಕೊಂಡಿದ್ದರು.

ಸ್ನೇಹಿತರು ಎಂದರೇ ಹೆಚ್ಚು ಪ್ರೀತಿ ತೊರುತ್ತಿದ್ದ ಹಾಗೂ ಅವರ ಕಷ್ಟಸುಖದಲ್ಲಿ ಭಾಗಿಯಾಗುತ್ತಿದ್ದ ಕಾರಣಕ್ಕೆ ಅವರ ಪಾಲಿಗೆ ಡಿಎಂ ಬಾಸ್ ಎಂಬ ಅಭಿಮಾನಕ್ಕೆ ಪಾತ್ರರಾಗಿದ್ದರು.

ಬಹುದೊಡ್ಡ ರಾಜಕೀಯ ಕನಸು ಹೊಂದಿದ್ದ ಮಲ್ಲಿಕಾರ್ಜುನ್, ತನ್ನ ಗೆಳೆಯರನ್ನು ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಚುನಾವಣೆಗೆ ನಿಲ್ಲಿಸಿ ತಾನೇ ಅಭ್ಯರ್ಥಿ ರೀತಿ ಮುಂದೇ ನಿಂತು ಗೆಲ್ಲಿಸಿಕೊಳ್ಳುತ್ತಿದ್ದರು. ಒಟ್ಟಿನಲ್ಲಿ ಸ್ನೇಹಿತರ, ದುರ್ಗದ ಜನರ ಪ್ರೀತಿ ಗಳಿಸಿದ್ದ ಮಲ್ಲಿಕಾರ್ಜುನ್ ನಿಧನ ಸುದ್ದಿ ಕೇಳುತ್ತಿದ್ದಂತೆ ಸ್ನೇಹಿತರ ದಂಡು ತಂಡೋಪತಂಡವಾಗಿ ತೆರಳಿ ಅಂತಿಮ ದರ್ಶನ ಪಡೆದು ಕಂಬನಿ ಮಿಡಿಯುತ್ತಿದ್ದರು. ಇದೇ ಮಲ್ಲಿಕಾರ್ಜುನ್ ಗಳಿಸಿದ್ದ ಸ್ನೇಹಕ್ಕೆ ಸಾಕ್ಷಿ ಎನ್ನಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment