Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೆದೇಹಳ್ಳಿ ಹೈವೇ ಬ್ರಿಡ್ಜ್ ಬಳಿ ಅಪಘಾತ |  ಎಲೆಕ್ಟ್ರಿಕ್ ಸ್ಕೂಟರ್ ಗೆ ಕಾರು ಡಿಕ್ಕಿ ಓರ್ವ ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಎಲೆಕ್ಟ್ರಿಕ್ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4 ರ ಮೆದೇಹಳ್ಳಿ ಹೈವೇ ಅಂಡರ್ ಬ್ರಿಡ್ಜ್ ಮೇಲೆ ಇಂದು ಅಂಜೆ 4:40 ರ ವೇಳೆಗೆ ಈ ದುರಂತ ಸಂಭವಿಸಿದೆ.

ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ಹನುಮಂತಪ್ಪ (62) ಮೃತವ್ಯಕ್ತಿ. ದಾವಣಗೆರೆ ಕಡೆಗೆ  ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿದ್ದ ಹನುಮಂತಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment