Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಗಮ ಮಂಡಳಿಯಲ್ಲಿ ಚಿತ್ರದುರ್ಗಕ್ಕೆ ಸಿಂಹಪಾಲು | ಜಿಲ್ಲೆಯ ಆರು ಮಂದಿಯ ಕೈ ಹಿಡಿದ ನಿಗಮ, ಪ್ರಾಧಿಕಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.29 : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನೇಮಕ ಮಾಡುವ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ಪಟ್ಟಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಐದು ಮಂದಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಮತ್ತು ಒಬ್ಬರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.

1) ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ
ಜಿ. ಎಸ್. ಮಂಜುನಾಥ್ ಅವರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಪಾಧ್ಯಕ್ಷ ಸ್ಥಾನ.

2) ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ತಾಜ್ ಪೀರ್ ಅವರಿಗೆ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ

3) ಚಿತ್ರದುರ್ಗದ ಮೆಹಬೂಬ್ ಪಾಷಾ (ಸಿ.ಕೆ.ಜಾಫರ್ ಷರೀಫ್ ಅವರ ಅಳಿಯ) ಅವರಿಗೆ  ಕಂಠೀರವ ಸ್ಟುಡಿಯೋ ಅಧ್ಯಕ್ಷ ಸ್ಥಾನ.

4) ಹೊಳಲ್ಕೆರೆಯ ಮಾಜಿ ಜಿ.ಪಂ.ಸದಸ್ಯೆ ಸವಿತಾ ರಘು ಅವರಿಗೆ ಕರ್ನಾಟಕ ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

5) ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಜಿ.ಪಂ. ಸದಸ್ಯ ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಸ್ಥಾನ. ಮತ್ತು

6) ಬಳ್ಳಾರಿ ಮೂಲದ ಮೊಳಕಾಲ್ಮೂರು ಕ್ಷೇತ್ರದ ಮಾಜಿ      ಜಿ.ಪಂ. ಸದಸ್ಯ ಮುಂಡರಗಿ ನಾಗರಾಜ್ ಅವರಿಗೆ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಇದಕ್ಕೂ ಮೊದಲು ನಿಗಮ ಮಂಡಳಿ ಪಟ್ಟಿಯಲ್ಲಿ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರಿಗೆ ನಿಗಮ ಮಂಡಳಿ ಸ್ಥಾನ ನೀಡಲಾಗಿತ್ತು. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆಯ ಎಂಟು ಮಂದಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಲಭಿಸಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಗೊಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment