ಬೆಂಗಳೂರು, ಫೆಬ್ರವರಿ. 29 : ಹಿರಿಯ ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಶಿವರಾಮ್ ಅವರು ಹೃದಯಾಘಾತಕ್ಕೂ ಒಳಗಾಗಿದ್ದರು. 71 ವರ್ಷಕ್ಕೆ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನದಿಂದ ಆಸ್ಪತ್ರೆಯಲ್ಲಿಯೇ ದಾಖಲಾಗಿದ್ದರು. ಇದೀಗ ನಿಧನರಾಗಿದ್ದಾರೆ.
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಕೆ.ಶಿವರಾಮ್ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಟರಾಗಿಯೂ ಹಲವು ಚಿತ್ರಗಳಲ್ಲಿ ನಟಿಸಿ, ಕನ್ನಡ ಚಿತ್ರರಂಗಕ್ಕೆ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ… pic.twitter.com/pQuFi6YP1F
— DK Shivakumar (@DKShivakumar) February 29, 2024
ಸರ್ಕಾರಿ ಸೇವೆ, ಸಿನಿಮಾ ಕ್ಷೇತ್ರವಲ್ಲದೆ, ರಾಜಕೀಯದಲ್ಲೂ ಶಿವರಾಮ್ ಗುರುತಿಸಿಕೊಂಡಿದ್ದರು. 9ಕ್ಕೂ ಹೆಚ್ಚು ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರಾಜಕೀಯಕ್ಕೂ ಧುಮುಕಿ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.
ಕೆ ಶಿವರಾಮ್ ಅವರನ್ನು ರಾಜಕೀಯ ಗಣ್ಯರು ಬೆಳಗ್ಗೆಯಿಂದಾನೇ ಆಸ್ಪತ್ರೆಗೆ ಭೇಟಿ ಕೊಟ್ಟು, ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ವಿ ಸೋಮಣ್ಣ ಸೇರಿದಂತೆ ಗಣ್ಯರು ಹಲವರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಿಸಿಕೊಂಡು ಬಂದಿದ್ದರು. ಅವರ ಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ.