ಬೆಂಗಳೂರು: ಇಂದು ಸಿಲಿಕಾನ್ ಸಿಟಿಯ ಮಂದಿಯನ್ನೇ ಬೆಚ್ಚಿಬೀಳಿಸಿದೆ ರಾಮೇಶ್ವರಂ ಕೆಫೆ ಸ್ಪೋಟ. ಯಾಕಂದ್ರೆ ರಾಮೇಶ್ವರಂ ಕೆಫೆ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಪ್ರತಿ ದಿನ ಏನಿಲ್ಲ ಅಂದ್ರು ಐದರಿಂದ ಆರು ಸಾವಿರ ಮಂದಿ ಭೇಟಿ ನೀಡುತ್ತಾರೆ. ಇಂಥ ಜಾಗದಲ್ಲಿ ಬ್ಲಾಸ್ಟ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಕುಂದಲಹಳ್ಳಿಯಲ್ಲಿರುವ ಕೆಫೆ ಬ್ಲಾಸ್ಟ್ ಆಗಿದ್ದು, ಹಲವರು ಗಾಯಗೊಂಡಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಈ ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಟೆರರಿಸ್ಟ್ ಮಾಡಿರುವ ಸಂಗತಿ ಎಂಬುದು ನಮಗೆ ತಿಳಿದಿಲ್ಲ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಯಾರೋ ಒಬ್ಬ ಬ್ಯಾಗ್ ಇಟ್ಟಿದ್ದ ಎಂಬ ಮಾಹಿತಿ ತಿಳಿದು ಬಂದಿದೆ. ಪೊಲೀಸರು ಅದರ ತನಿಖೆ ನಡೆಸುತ್ತಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ. ಸ್ಪೋಟಕ ಬಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದ ಸ್ಪೋಟ ಅದು. ಆದರೂ ಪರಿಣಾಮಕಾರಿಯಾಗಿದೆ. ಇತ್ತಿಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಮಂಗಳೂರಿನಲ್ಲಿ ಹಿಂದಿನ ಸರ್ಕಾರದ ಸಮಯದಲ್ಲಿ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪತ್ತೆ ಹಚ್ಚಿ ಶಿಕ್ಷೆ ನೀಡಲಾಗುತ್ತದೆ.
ಬ್ಲಾಸ್ಟ್ ಮಾಡಿರುವುದು ಸತ್ಯ. ಬ್ಲಾಸ್ಟ್ ಮಾಡಿರುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಶಸ್ತಿನ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾತಣ ಮಾಡಬಾರದು. ಪೊಲೀಸರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಆತ ಕ್ಯಾಶಿಯರ್ ಬಳಿ ಹೋಗಿ ಟೋಕನ್ ತೆಗೆದುಕೊಂಡಿದ್ದಾನೆ.ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದಿದ್ದಾರೆ.