ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್.02 : ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ರಕ್ತ ಕೊಟ್ಟು ಜೀವ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ರವೀಂದ್ರನಾಥ್ ಹೇಳಿದರು.
ಕರ್ನಾಟಕ ರಾಜ್ಯ ಮಾದಿಗ ಸಮಾಜದ ವತಿಯಿಂದ ಐ.ಎಂ.ಎ.ಹಾಲ್‍ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಎರಡನೆ ವರ್ಷದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಮಹಾದಾನ. ರಕ್ತಕ್ಕೆ ಪರ್ಯಾಯ ಬೇರೆ ಯಾವುದೂ ಇಲ್ಲ. ಅಪಘಾತ, ಹೆರಿಗೆ, ಆಪರೇಷನ್ ಇನ್ನು ಅನೇಕ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆಯಿರುತ್ತದೆ. ಹಾಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರಿಗೆ ರಕ್ತ ನೀಡಿ ಅಮೂಲ್ಯವಾದ ಪ್ರಾಣ ಉಳಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಆಯಕ್ತರಾದ ಸೋಮಶೇಖರ್, ಭ್ರಷ್ಠಾಚಾರ ವಿರೋಧಿ ಆಂದೋಲನ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ, ಕರ್ನಾಟಕ ರಾಜ್ಯ ಮಾದಿಗ ಸಮಾಜ ಜಿಲ್ಲಾ ಘಟಕದ ಗೌರವಾಧ್ಯಕ್ಷ ದೇವರಾಜ್, ಅಧ್ಯಕ್ಷ ಟಿ.ಶೇಖರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓ.ಸೋಮಪ್ಪ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.