Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 04 : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಉಪಾಧ್ಯಕ್ಷರಾಗಿ ಸರ್ಕಾರದಿಂದ ನೇಮಕವಾಗಿರುವ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್‍ರವರನ್ನು ಇಂದು ಅವರ ನಿವಾಸದಲ್ಲಿಂದು ಚಿತ್ರದುರ್ಗ ನಗರಸಭೆಯ ಪೌರಾಯುಕ್ತರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದಿಸಿದರು.

ಒಂದು ಕಾಲದಲ್ಲಿ ನಗರಸಭೆಯ ಸಿಬ್ಬಂದಿ ಮಾಡಿದ ಕೆಲಸಕ್ಕೆ ಸರಿಯಾದ ರೀತಿಯ ವೇತನವೂ ಸಿಗದ ಪರಿಸ್ಥಿತಿಯಲ್ಲಿ ಮಂಜುನಾಥ್‍ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡುವುದರ ಮೂಲಕ ಸರ್ಕಾರದಿಂದ ನೇರವಾಗಿ ವೇತನವನ್ನು ಪಡೆಯುವಂತೆ ಮಾಡುವಲ್ಲಿ ಮಂಜುನಾಥ್‍ರವರ ಪಾತ್ರ ಆಧಿಕವಾಗಿದೆ. ಇವರು ಮಾಡಿದ ಹೋರಾಟ, ಶ್ರಮದ ಫಲವಾಗಿ ಇಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ಅವರನ್ನು ಗೌರವಿಸಿ ಈಗ ಈ ಹುದ್ದೆಯನ್ನು ನೀಡಿದೆ ಮುಂದಿನ ದಿನಮಾನದಲ್ಲಿ ಕಾರ್ಮಿಕರಿಗೆ ಉತ್ತಮವಾದ ಸೌಲಭ್ಯವನ್ನು ಕಲ್ಪಿಸುವಲ್ಲಿ ಮುಂದಾಗಲಿ ಎಂದು ಎಲ್ಲರು ಶುಭ ಕೋರಿದರು.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ರೇಣುಕಾ, ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಮ್ಮ, ಕಂದಾಯ ಆಧಿಕಾರಿ ಜಯ್ಯಪ್ಪ, ಆರೋಗ್ಯ ಆಧಿಕಾರಿ ಪುಟ್ಟಸ್ವಾಮಿ, ಸೇರಿದಂತೆ ಸಿಬ್ಬಂದಿಗಳಾದ ಲವ, ರೇಣಿಕಾ, ಭೀಷ್ಮ ಮತ್ತು ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...