ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಕೆಳಗೋಟೆಯಲ್ಲಿರುವ ಶಿವಭಕ್ತ ಬೇಡರಕಣ್ಣಪ್ಪ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಶಿವನಿಗೆ ಪ್ರಿಯವಾದ ಬಿಲ್ವಪತ್ರೆ, ತುಳಸಿ, ಮಲ್ಲಿಗೆ, ಕನಕಾಂಬರ, ಸೇವಂತಿಗೆ, ಸುಗಂಧರಾಜ ಹೂವು ಹಾಗೂ ಹಾರಗಳಿಂದ ಸಿಂಗರಿಸಲಾಗಿತ್ತು. ಬೆಳಗಿನಿಂದ ರಾತ್ರಿಯವರೆಗೆ ನೂರಾರು ಭಕ್ತರು ಧಾವಿಸಿ ಬೇಡರಕಣ್ಣಪ್ಪನಿಗೆ ಭಕ್ತಿ ಸಮರ್ಪಿಸಿದರು.
ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಕೆಳಗೋಟೆಯ ಬೇಡರ ಕಣ್ಣಪ್ಪ ದೇವಸ್ಥಾನದಿಂದ ಮಹಾಶಿವರಾತ್ರಿಯ ಪ್ರಯುಕ್ತ ಶುಕ್ರವಾರ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
ಅಡ್ಡ ರಸ್ತೆಯಿಂದ ಆರಂಭಗೊಂಡ ಮೆರವಣಿಗೆ ಮುನ್ಸಿಪಲ್ ಕಾಲೋನಿ, ಎಸ್ಪಿ.ಕಚೇರಿ ರಸ್ತೆ, ಆಕಾಶವಾಣಿ ಮುಂಭಾಗದಿಂದ ದೇವಸ್ಥಾನ ತಲುಪಿತು.
ಸಾರೋಟಿನಲ್ಲಿ ಶಿವನ ಫೋಟೋದೊಂದಿಗೆ ಹೊರಟ ಮೆರವಣಿಗೆಯಲ್ಲಿ ಮೈಸೂರಿನವರು ಚಂಡೆ ಮೃದಂಗ ಬಾರಿಸುತ್ತಿದ್ದರು. ಮೆರವಣಿಗೆಯುದ್ದಕ್ಕೂ ಕೆಳಗೋಟೆಯ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮ ಪಟ್ಟರು.
ಬೇಡರಕಣ್ಣಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಪಾಪನಾಯಕ, ನಗರಸಭೆ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಕೆ.ಸುಬ್ರಮಣ್ಯಂ, ಉದ್ಯಮಿ ಮಹೇಶ್, ಮಂಜುನಾಥ್, ಶಿವರಾಜ್, ಚಂದ್ರಶೇಖರ್, ಶ್ರೀನಿವಾಸ್, ಸೋಮಶೇಖರ್, ಮಾರುತಿ, ಸುರೇಶ್ ಇನ್ನು ಅನೇಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.