Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಟಕ ಪ್ರದರ್ಶನದ ವೇಳೆಯೇ ಪ್ರಾಣಬಿಟ್ಟ ವಿಲನ್ ಪಾತ್ರಧಾರಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್.11 :  ನಾಟಕ ಪ್ರದರ್ಶನದ ವೇಳೆ ಖಳನಟ  ಪಾತ್ರದಾರಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಹೆಗ್ಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಶ್ರೀ ಕೊಳಾಳು ಕೆಂಚಾವಧೂತ ಸ್ವಾಮಿಗಳ ಕೃಪಾಶೀರ್ವಾದಗಳೊಂದಿಗೆ
ಶ್ರೀ ದುರ್ಗಾಂಭಿಕಾ ಕೃಪಾ ಪೋಷಿತ ನಾಟಕ ಮಂಡಲಿವತಿಯಿಂದ ಶ್ರೀ ದುರ್ಗಾಂಕಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಗ್ಗೆರೆ ಗ್ರಾಮದಲ್ಲಿ, ಭಾನುವಾರ ರಾತ್ರಿ 9.30 ಕ್ಕೆ ಸರಿಯಾಗಿ ವಿಷ ಕೊಟ್ಟವಳಗೇನು ಗೊತ್ತು ವಿಶ್ವಾಸದ ಬೆಲೆ ಅಥವಾ ಮರಣ ಪ್ರೇಮದ ಗೂಡು ಸೇರಿದ ಹಕ್ಕಿ ಎಂಬ ಸಾಮಾಜಿಕ ನಾಟಕದ ವಿಲನ್ ಪಾತ್ರದಾರಿ ಸಂತೋಷ್(35) ಮೊದಲನೆ ಪ್ರದರ್ಶನ ಮುಗಿಸಿ ಎರಡನೇ ಪ್ರದರ್ಶನ ಮಾಡುವ ಸಂದರ್ಭದಲ್ಲಿ ನಾಟಕವಾಡುತ್ತಲೇ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತಕ್ಕೆ ಒಳಗಾಗಿ ನಾಟಕದ ಹೆಸರಿನಲ್ಲೇ ಬರುವಂತೆ ವಿಲನ್ ಪಾತ್ರದಾರಿ ಸಂತೋಷ್ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಘಟನೆಯಿಂದ ನಾಟಕ ಪ್ರದರ್ಶನ ಸ್ಥಗಿತವಾಗಿದೆ.

ಪ್ರೇಮದ ಗೂಡು ಸೇರಿದ ಹಕ್ಕಿಯಂತೆ ಮರಳಿ ಬಾರದ ಊರಿಗೆ ಪಾತ್ರಧಾರಿ ತೆರಳಿದ್ದಾರೆ .ನಾಟಕ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಕಣ್ಣೀರು ಹಾಕಿದ ದೃಶ್ಯ ಮನಕಲುಕುವಂತಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment