Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತ ವಿರೋಧಿ ಸರ್ಕಾರ ರಾಜ್ಯಕ್ಕೆ ಅಗತ್ಯವಿಲ್ಲ : ಮಾಜಿ ಶಾಸಕ ಎ.ಎಸ್. ಪಾಟೀಲ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 11 :  ಈ ಹಿಂದೆ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಹಿತವನ್ನು ಕಾಯುವಂತಹ ಕೆಲಸ ಮಾಡಿತ್ತು. ಆದರೆ ಈಗ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಂತಹ ಹಲವಾರು ಯೋಜನೆಗಳನ್ನು ರದ್ದು ಮಾಡುವುದರ ಮೂಲಕ ರೈತ ವಿರೋಧಿ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು, ಮಾಜಿ ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ ಸರ್ಕಾರದ ಕ್ರಮವನ್ನು ಖಂಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ಸರಕಾರವಿದ್ದಾಗ  ರೈತರಿಗೆ ಪರಿಹಾರವನ್ನು ನೀಡುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡುವುದು ಇರಲಿ. ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ರಾಜ್ಯದಲ್ಲಿ ಎಂದೂ ಕಾಣದಂತಹ ಬರಗಾಲ ಬಂದಿದೆ. ರಾಜ್ಯದಲ್ಲಿ ಎಲ್ಲೂ ಸಹ ಬರಗಾಲದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಚುನಾಯಿತ ಪ್ರತಿನಿಧಿಗಳಾಗಲಿ, ಉಸ್ತುವಾರಿ ಸಚಿವರುಗಳಾಗಲಿ, ಎಲ್ಲೂ  ಸಹ ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ.ರೈತರ ಕಷ್ಟ ಸುಖಗಳನ್ನು ಆಲಿಸಿಲ್ಲ. ಇಂತಹ ಸರ್ಕಾರ ರಾಜ್ಯಕ್ಕೆ ಅಗತ್ಯವಿಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದರು.

ಯಾವುದೇ ಕಾರಣದಿಂದಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪರವಾಗಿ ನಿಲ್ಲುತ್ತಿಲ್ಲ. ಈಗಲೂ ಸಹ ರಾಜ್ಯ ಸರ್ಕಾರ  ರೈತರ ಪರವಾಗಿ ನಿಲ್ಲದಿದ್ದರೆ ರಾಜ್ಯ ಬಿಜೆಪಿ ರೈತ ಮೋರ್ಚಾದ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು. ನಾವು ಹಲವಾರು ಕಡೆಗಳಲ್ಲಿ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿದ್ದೇವೆ… ಅವರು ಸಹ ನಮಗೆ ಯಾವುದೇ ರೀತಿಯ ಗ್ಯಾರಂಟಿಗಳು ಬೇಡ. ನೀರು ಮತ್ತು ಸರಿಯಾದ ಪ್ರಮಾಣದಲ್ಲಿ ವಿದ್ಯುತ್ತನ್ನು ನೀಡಲಿ ಎಂದು ಒತ್ತಾಯಿಸುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ನೀಡಬೇಕಾಗಿದೆ…

ಚಿತ್ರದುರ್ಗ ಜಿಲ್ಲೆಯಲ್ಲಿ ಬರಗಾಲದ ತೀವ್ರತೆ ಹೆಚ್ಚಾಗಿದ್ದು… ಇಲ್ಲೂ ಸಹ ಯಾವುದೇ ತರವಾದಂತಹ  ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಿಲ್ಲ… ಇದರ ಬಗ್ಗೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸಹ ಗಮನ ನೀಡಿಲ್ಲ.. ಜಿಲ್ಲಾ ಉಸ್ತುವಾರಿ ಸಚಿವರು ಸಹ ಯಾವುದೇ ಜಮೀನುಗಳಿಗೆ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರ ಅಪ್ಪರ್ ಭದ್ರಾ ಮೇಲ್ದಂಡೆ  ಯೋಜನೆಗೆ 5300 ಕೋಟಿ ರೂ ನೀಡುತ್ತೇನೆ ಎಂದು ಹೇಳಿತ್ತು… ಅದರಂತೆ ಹಣ ನೀಡಲು ತಯಾರಿದೆ ಆದರೆ ಅದಕ್ಕೆ ತಕ್ಕಂತೆ ನಿಯಮಗಳನ್ನು ರಾಜ್ಯ ಸರ್ಕಾರ ಪಾಲನೆ ಮಾಡಬೇಕಿದೆ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗಳನ್ನು ನಿರ್ಮಾಣ ಮಾಡಿದ ಮೇಲೆ ಕೃಷಿ ಸಿಂಚನ ಯೋಜನೆಯಡಿ ರೈತರ ಹೊಲಗಳಿಗೆ ಹನಿ ನೀರಾವರಿ ಯೋಜನೆಯಡಿ ನೀರನ್ನು ನೀಡುವ ಯೋಜನೆ ಇದಾಗಿದೆ.ಇದರ ಬಗ್ಗೆ ರಾಜ್ಯ ಸರ್ಕಾರ ಗಮನ ನೀಡಬೇಕಾಗಿದೆ. ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು ಎಂದ ಅವರು, ರಾಜ್ಯ ಸರ್ಕಾರ ಬರಗಾಲಕ್ಕೆ ಅಗತ್ಯವಾಗಿ ಬೇಕಾದ ಕಾರ್ಯಕ್ರಮಗಳನ್ನು ಸರ್ಕಾರ ಬಂದು 9 ತಿಂಗಳಾದರೂ ಸಹಾ ರೂಪಿಸಿಲ್ಲ, ಇದರ ಬದಲು ಗ್ಯಾರಂಟಿಗಳಿಎಗ ಹಣವನ್ನು ಹೊಂದಿಸುರವ ಕಾರ್ಯದಲ್ಲಿ ಸರ್ಕಾರ ಮಗ್ನವಾಗಿದೆ, ಇನ್ನು ಜನತೆಯ ಸಮಸ್ಯೆಯನ್ನು ಆಲಿಸಲು ಸಮಯವಿಲ್ಲ ಎಂದು ದೂರಿದರು.

ಬೆಂಗಳೂರಿಂದ ಹೊರಟು ತುಮಕೂರು ಶಿರಾ ಮಾರ್ಗವಾಗಿ ಹಿರಿಯೂರು ತಾಲೂಕು ಜವಗೊಂಡನಹಳ್ಳಿಯಲ್ಲಿ ಗೊಪೂಜೆ  ಟ್ರ್ಯಾಕ್ಟರ್ ಪೂಜೆ ಮತ್ತು ಕೃಷಿ ಪರಿಕರಗಳ ಪೂಜೆ ಸಲ್ಲಿಸಿ ಆ ಭಾಗದ  ರೈತರೊಂದಿಗೆ ಸಂವಾದ ಮಾಡಿ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದು ಅಲ್ಲಿಂದ ಆ ಭಾಗದ ಹಳ್ಳಿಯಲ್ಲಿ ರೈತರೊಂದಿಗೆ ಗ್ರಾಮಪರಿಕ್ರಮ ಯಾತ್ರೆ ನಂತರ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ರೈತರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪದ ಯೋಜನೆಗಳ ಬಗ್ಗೆ ಸಂವಾದ ನಡೆಸಿದರು.

ಗೋಷ್ಠಿಯಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ರಾಮದಾಸ್,ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಕೆ ಮಲ್ಲಿಕಾರ್ಜುನ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಬುರುಡೆ ಕಟ್ಟೆ ರಾಜೇಶ್,ಚಿತ್ರದುರ್ಗ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ಟಿ ಜಿಲ್ಲಾ ಬಿಜೆಪಿ ವಕ್ತಾರರಾದ ಬೇದ್ರೇ ನಾಗರಾಜು ದಗ್ಗೆ ಶಿವಪ್ರಕಾಶ್, ಚಾಲುಕ್ಯ ನವೀನ್, ಶಾರದಮ್ಮ, ಶ್ಯಾಮಲ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!