Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ನಡೆಯಬೇಕಿದ್ದ 5, 8, 9ನೇ ತರಗತಿ ಬೋರ್ಡ್ ಎಕ್ಸಾಂ ಮುಂದೂಡಿಕೆ..!

---Advertisement---

ಬೆಂಗಳೂರು: 5, 8, 9 ನೇ ತರಗತಿ ಮಕ್ಕಳಿಗೆ ನಾಳೆ ನಡೆಯಬೇಕಿದ್ದ ಬೋರ್ಡ್ ಪರೀಕ್ಷೆಯನ್ನು ಇಲಾಖೆ ಮುಂದೂಡಿ ಆದೇಶ ಹೊರಡಿಸಿದೆ. ಬೋರ್ಡ್ ಪರೀಕ್ಷೆಗೆಂದು ತಯಾರಾಗಿದ್ದ ಮಕ್ಕಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪರೀಕ್ಷೆಯ ದಿನಾಂಕವನ್ನು ಮುಂದೂಡಿರುವ ಇಲಾಖೆ ಪರೀಕ್ಷೆ ಯಾವತ್ತು ನಡೆಯಬಹುದು ಎಂಬ ಮಾಹಿತಿಯನ್ನು ನೀಡಿಲ್ಲ.

ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆ ಹಿನ್ನೆಲೆಯಲ್ಲಿ ಪರೀಕ್ಷೆಗಳು ನಾಳೆಗೆ ನಿಗದಿತಾಗಿತ್ತು. ಇದೀಗ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿರುವ ಕಾರಣ 5, 8, 9ನೇ ತರಗತಿಯ ಬೋರ್ಡ್‌ ಪರೀಕ್ಷೆಗಳನ್ನ ಸದ್ಯಕ್ಕೆ ನಡೆಸುವಂತಿಲ್ಲ. ಇದರಿಂದ ರಾಜ್ಯದ ಬೋರ್ಡ್ ಎಕ್ಸಾಂ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಭಾರೀ ಹಿನ್ನಡೆಯಾಗಿದೆ.

 

ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾ.ಪಂಕಜ್ ಮಿತ್ತಲ್ ಅವರ ನ್ಯಾಯಪೀಠ ಹೈಕೋರ್ಟ್‌ ವಿಭಾಗೀಯ ಪೀಠದ ಮೇಲ್ಮನವಿ ಅರ್ಜಿಯ ಅಂತಿಮ‌ ತೀರ್ಪು ನೀಡುವವರೆಗೂ ಬೋರ್ಡ್ ಪರೀಕ್ಷೆಗಳನ್ನ ನಡೆಸದಂತೆ ಆದೇಶ ಹೊರಡಿಸಲಾಗಿದೆ. ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿದಾರರ ಪರ ಹಿರಿಯ ವಕೀಲ ಕೆ.ವಿ.ಧನಂಜಯ್ ವಾದ ಮಂಡಿಸಿದ್ದರು. ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದ್ದು, ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯ ಸಂಪೂರ್ಣ ವಾದ ಮಂಡಿಸಿ ತೀರ್ಪು ನೀಡುವರೆಗೂ ಬೋರ್ಡ್ ಎಕ್ಸಾಂ ನಡೆಸಬಾರದು ಎಂದು ಸೂಚಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment