Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ‌ ಚುನಾವಣಾ ದಿನಾಂಕ ಘೋಷಣೆ

Facebook
Twitter
Telegram
WhatsApp

 

ಸುದ್ದಿಒನ್, ನವದೆಹಲಿ, ಮಾರ್ಚ್.15:  ಕೇಂದ್ರ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಿದ್ದು, ಶನಿವಾರ (ಮಾರ್ಚ್ 16) ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲಿದೆ.

ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಮಾಧ್ಯಮ ಸಭೆ ನಡೆಸಿ ವೇಳಾಪಟ್ಟಿ ಪ್ರಕಟಿಸಲಿದೆ. ಈ ಮಟ್ಟಿಗೆ ಇಸಿ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ‌ ತಿಳಿಸಿದೆ. ಲೋಕಸಭೆ ಜತೆಗೆ ಐದು ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣಾ ವೇಳಾಪಟ್ಟಿ ಪ್ರಕಟವಾಗಲಿದೆ.

ಪ್ರಸಕ್ತ ಲೋಕಸಭೆಯ ಅವಧಿಯು ಜೂನ್ 16ಕ್ಕೆ ಮುಕ್ತಾಯವಾಗಲಿದೆ. ಅಲ್ಲದೆ, ಈ ವರ್ಷದ ಮೇ ವೇಳೆಗೆ ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಉದ್ದೇಶಕ್ಕಾಗಿ, ಇಸಿ ಇತ್ತೀಚೆಗೆ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ಪ್ರವಾಸ ಮಾಡಿ ಸ್ಥಳೀಯ ರಾಜಕೀಯ ಪಕ್ಷಗಳು ಮತ್ತು ಕ್ಷೇತ್ರ ಮಟ್ಟದಲ್ಲಿ ಅಧಿಕಾರಿಗಳೊಂದಿಗೆ ವಿಸ್ತೃತ ಸಭೆಗಳನ್ನು ನಡೆಸಿತ್ತು. ಬಳಿಕ ವೇಳಾಪಟ್ಟಿ ಸಿದ್ಧಪಡಿಸಲಾಗಿತ್ತು.

ಕಳೆದ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಮಾರ್ಚ್ 10, 2019 ರಂದು ಪ್ರಕಟಿಸಲಾಗಿತ್ತು. ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಮೇ 23ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿಯೂ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ವೇಳಾಪಟ್ಟಿ ಪ್ರಕಟವಾದ ಕೂಡಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!