ಲೋಕಸಭಾ ಸಾರ್ವತ್ರಿಕ ಚುನಾವಣೆ-2024 | ಮತದಾನ ಕೇಂದ್ರಗಳ ಕರಡು ಪಟ್ಟಿ ಪ್ರಕಟ

1 Min Read

 

ಚಿತ್ರದುರ್ಗ. ಮಾ.15:  ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತದಾನ ಕೇಂದ್ರಗಳ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242 ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 299 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1661 ಮತಗಟ್ಟೆಗಳನ್ನು ಹೊಂದಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಚುನಾವಣಾ ತಹಶೀಲ್ದಾರ್ ಎಲ್.ಜಯಣ್ಣ,  ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಮಿತಿ ಸದಸ್ಯ ಯಶವಂತ್ ಕುಮಾರ್, ಸಿಪಿಐ ಡಿಇಒ ಗೌಸ್‍ಪೀರ್, ಬಿಎಸ್‍ಪಿ ಜಿಲ್ಲಾ ಅಧ್ಯಕ್ಷ ಎನ್.ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.

 

Share This Article
Leave a Comment

Leave a Reply

Your email address will not be published. Required fields are marked *