Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭಾ ಚುನಾವಣೆ: ಯದುವೀರ್ ಅವರನ್ನು ಟೀಕಿಸದಂತೆ ಸಿಎಂ ಕಿವಿಮಾತು

---Advertisement---

ಮೈಸೂರು: ಲೋಕಸಭಾ ಚುನಾವಣೆಗೆ ಇಂದು ದಿನಾಂಕ ಅನೌನ್ಸ್ ಆಗಲಿದೆ. ಅದಕ್ಕೂ ಮುನ್ನ ಕಾಂಗ್ರೆಸ್ – ಬಿಜೆಪಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಅದರಲ್ಲೂ ಮೈಸೂರು ಲೋಕಸಭಾ ಕ್ಷೇತ್ರಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಾಂಗ್ರೆಸ್ ಪಕ್ಷದಿಂದ ಇನ್ನು ಅಭ್ಯರ್ಥಿಯ ಘೋಷಣೆಯಾಗಿಲ್ಲ.

ಚುನಾವಣೆ ಎಂದಾಗ ಯಾವುದೇ ಪಕ್ಷವಾಗಲಿ ಎದುರಾಳಿಗೆ ಮಾತಿನ ಮೂಲಕ ಚಾಟಿ ಬೀಸುತ್ತಾರೆ. ಆದರೆ ಈಗ ಸಿಎಂ ಸಿದ್ದರಾಮಯ್ಯ ಅವರು ಯದುವೀರ್ ಅವರ ವಿಚಾರವಾಗಿ ಒಂದು ಕಿವಿ ಮಾತು ಹೇಳಿದ್ದಾರೆ. ತಮ್ಮ ಪಕ್ಷದವರಿಗೆ ಈ ಬಗ್ಗೆ ತಿಳಿಸಿ ಹೇಳಿದ್ದಾರೆ. ಯಾವುದರೆ ಕಾರಣಕ್ಕೂ ಯದುವೀರ್ ಅವರನ್ನು ನಿಂದಿಸಬಾರದು ಎಂದಿದ್ದಾರೆ.

‘ಬಿಜೆಪಿ ವಿರುದ್ಧ ಮಾತನಾಡಿ. ಆದರೆ ಯದುವೀರ್ ಅವರ ವಿರುದ್ಧ ಮಾತನಾಡಬೇಡಿ. ಯದುವಂಶದ ಬಗ್ಗೆ ಮೈಸೂರು ಭಾಗದಲ್ಲಿ ಭಾವನಾತ್ಮಕ ಸಂಬಂಧವಿದೆ. ಅವರ ಬಗ್ಗೆ ಮಾತನಾಡಿದರೆ ನಮ್ಮ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ. ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ತಮ್ಮ ಪಕ್ಷದವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಮಾಡುವಾಗ ಬಿಜೆಪಿಯನ್ನು ಟೀಕಿಸುವ ಬರದಲ್ಲಿ ಅಲ್ಲಿನ ಅಭ್ಯರ್ಥಿಯನ್ನು ಟೀಕಿಸಿ ಬಿಡುತ್ತಾರೆ. ಹೀಗಾಗಿ ಮೊದಲೇ ಅಲರ್ಟ್ ಆದ ಸಿಎಂ ಸಿದ್ದರಾಮಯ್ಯ ಅವರು ಯದುವಂಶದ ಬಗ್ಗೆ ಯಾವುದೇ ರೀತಿಯ ಮಾತುಗಳನ್ನು ಆಡಬೇಡಿ ಎಂದೇ ಸೂಚನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...