ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 283 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 10337 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 94941 RTPCR ಟೆಸ್ಟ್ ಸೇರಿದಂತೆ ಒಟ್ಟು 105278 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 283 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 159 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 290 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 6 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.