Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುವ ಉದ್ಯಮಿ ಹರೀಶ್ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ನಗರದ ಯುವ ಉದ್ಯಮಿ, ಸರಸ್ವತಿಪುರಂ ಬಡಾವಣೆಯ ವಾಸಿ, ಜೆಸಿಆರ್ ಬಡಾವಣೆಯ ಸಿಡ್ವಿನ್ ಕಂಪ್ಯೂಟರ್ ಮಾಲೀಕ ಸಿ. ಹರೀಶ್ (48 ವರ್ಷ) ಇಂದು (ಸೋಮವಾರ) ರಾತ್ರಿ ಅಕಾಲಿಕವಾಗಿ ಸಾವನ್ನಪ್ಪಿದ್ದಾರೆ.

ಮೃತರು ತಾಯಿ, ಪತ್ನಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸರಸ್ವತಿಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ನಾಳೆ ಸಂಜೆಯವರೆಗೂ ವ್ಯವಸ್ಥೆ ಮಾಡಲಾಗಿದೆ. ನಾಳೆ (ಮಂಗಳವಾರ) ಸಂಜೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಗುಮೊಗದಿಂದಲೇ ಎಲ್ಲರನ್ನೂ ಆಕರ್ಷಿಸುತ್ತಿದ್ದ ಹರೀಶ್ ಅವರು ಅಪಾರ ಸಂಖ್ಯೆಯ ಸ್ನೇಹಿತರನ್ನು ಹೊಂದಿದ್ದರು.
ಹರೀಶ್ ಅವರ ಅಕಾಲಿಕ ಸಾವಿನಿಂದ ಸ್ನೇಹಿತರು ಹಿತೈಷಿಗಳು ತೀವ್ರ ಆಘಾತಕ್ಕೀಡಾಗಿದ್ದು, ನಗರದ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಆರ್ಯವೈಶ್ಯ ಸಂಘದ ಅಧ್ಯಕ್ಷರು, ಸದಸ್ಯರು, ಸಮಾಜದ ಮುಖಂಡರು, ಅವರ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...