Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡ ಐಐಟಿಯಲ್ಲಿ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

---Advertisement---

ಧಾರವಾಡ ಐಐಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಐಐಟಿ ಧಾರವಾಡದಲ್ಲು ಒಟ್ಟು 1 ಯಂಗ್ ಪ್ರೊಫೆಶನಲ್- II (IT) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 23, 2024ರಂದು ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆನ್​​ಲೈನ್ ಮೂಲಕ ಸರ್ಜಿ ಸಲ್ಲಿಕೆ ಮಾಡಬೇಕು.

 

ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ಸಂಸ್ಥೆಯಲ್ಲಿ ಯಂಗ್ ಪ್ರೊಫೆಶನಲ್- II (IT) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಜಿ ಸಲ್ಲಿಸಲು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದವರು ಅರ್ಹತೆ ಹೊಂದಿರುತ್ತಾರೆ. ಇನ್ನು ಆಯ್ಕೆಯಾದವರಿಗೆ ಮಾಸಿಕ ವೇತನ ₹35,000 ನೀಡಲಾಗುತ್ತದೆ. ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಇನ್ಫರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್​/ಆರ್ಟಿಫಿಸಿಯಲ್ ಇಂಟೆಲಿಜೆನ್ಸ್​/ಆಪರೇಟಿಂಗ್ ಸಿಸ್ಟಮ್ಸ್​/ಸಾಫ್ಟ್‌​ವೇರ್ ಇಂಜಿನಿಯರಿಂಗ್/ಕಂಪ್ಯೂಟರ್ ಗ್ರಾಫಿಕ್ಸ್‌​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ

 

ಅರ್ಜಿ ಸಲ್ಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 36 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಆಸಕ್ತ ಅಭ್ಯರ್ಥಿಗಳು ವೆಬ್-ಸೈಟ್, ಪೋರ್ಟಲ್ ಡೆವಲಪ್​ಮೆಂಟ್​ ಮತ್ತು ನಿರ್ವಹಣೆ, MySQLನಲ್ಲಿ ಅನುಭವಿಯಾಗಿರಬೇಕು. ಅಭ್ಯರ್ಥಿಗಳು Java/C++/PHP/Python ಆಧಾರಿತ ಅಪ್ಲಿಕೇಶನ್ ಡೆವಲಪ್​ಮೆಂಟ್‌​​ನಲ್ಲಿ ಅನುಭವ ಹೊಂದಿರಬೇಕಾಗುತ್ತದೆ. ಕೆಲಸದ ಅಗತ್ಯ ಇರುವವರು ಈ ಮಾಹಿತಿಯನ್ನು ಸದುಪಯೋಗ ಪಡಿಸಿಕೊಳ್ಳಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...