Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಖ್ಯಾತ ಉದ್ಯಮಿ ನವರತನ್ ಮಲ್ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್. 26 : ನಗರದ ಖ್ಯಾತ ಉದ್ಯಮಿ ಹಾಗೂ ಹೋಲ್ ಸೇಲ್ ಬಟ್ಟೆ ವ್ಯಾಪಾರಿ ನವರತನ್ ಮಲ್ (75 ವರ್ಷ) ಇಂದು (ಮಂಗಳವಾರ) ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೇತ್ರ ದಾನ : ನವರತನ್ ಮಲ್ ಅವರ ನಿಧನದ ನಂತರ ಕುಟುಂಬದವರ ಅನುಮತಿಯ ಮೇರೆಗೆ ಕಣ್ಣುಗಳನ್ನು ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ಗೆ ದಾನ ನೀಡಿದ್ದಾರೆ. ಈ ಮೂಲಕ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದು ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ಸಂತಾಪ : ನವರತನ್ ಮಲ್ ಅವರ ನಿಧನಕ್ಕೆ ಜೈನ ಸಮುದಾಯದ ಮುಖಂಡರು, ಸೇರಿದಂತೆ ನಗರದ ಪ್ರಮುಖ ಸಂಘ ಸಂಸ್ಥೆಗಳು, ಸಂಘಟನೆಗಳ ಮುಖಂಡರು ಉದ್ಯಮಿಗಳು ಅವರ ಕುಟುಂಬಕ್ಕೆ ಭಗವಂತನು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment