Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್ ವಂಚಿತ ರಘು ಚಂದನ್ ಕಡೆಯವರು ಗೋ ಬ್ಯಾಕ್ ಗೋವಿಂದ ಕಾರಜೋಳ, ಗೋ ಬ್ಯಾಕ್ ಗೋವಿಂದ ಕಾರಜೋಳ ಎಂದು ಭಿತ್ತಿ ಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿ ಮುತ್ತಿಗೆ ಹಾಕಿದರು.  ಜೊತೆಗೆ ಸಗಣಿ ಹಾಗೂ ಮೊಟ್ಟೆ ಎಸೆಯಲು ಸಿದ್ದತೆಯಲಿದ್ದ ವಿಷಯ ತಿಳಿದ ತಕ್ಷಣ  ಪೊಲೀಸರು ವಶಕ್ಕೆ ಪಡೆದು ಅನಾಹುತ ತಪ್ಪಿಸಿದ್ದಾರೆ.

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರ ಪುತ್ರ ರಘು ಚಂದನ್ ಅವರು ಅಭ್ಯರ್ಥಿಯೆಂದು ಬಿಂಬಿಸಲಾಗಿತ್ತು. ಟಿಕೆಟ್ ಸಿಗುವ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ರಘು ಚಂದನ್ ಕಡೆಯವರು ಕಾರಜೋಳ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನಗರದಲ್ಲಿ ಸ್ವಾಭಿಮಾನ ಸಭೆ ನಡೆಸಿರುವ ರಘು ಚಂದನ್ ಅವರು ಏಪ್ರಿಲ್ 3ರಂದು ರಘು ಚಂದನ್ ನಾಮಪತ್ರ ಸಲ್ಲಿಸುತ್ತಾರೆ ಎಂದು ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ.

ಹಿರಿಯೂರಿನಲ್ಲಿ ಮಾತನಾಡಿದ ಗೋವಿಂದ ಕಾರಜೋಳ ಅವರು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿಕೂಟಕ್ಕೆ ಗೆಲುವು ಸಿಗಲಿದೆ. ಜಿಲ್ಲೆಯಲ್ಲಿ ಯಾವುದೇ ಬಂಡಾಯ ಇಲ್ಲ ಒಂದೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment