ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ದುಡಿದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಭರವಸೆ ನೀಡಿದ್ದರಾದರೂ ಕೊನೆಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.
ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕೆ ಇಳಿಸುವುದಾಗಿ ಡಾ. ಸಂದೀಪ್ ಅವರಿಗೆ ಭರವಸೆ ನೀಡಿ ಸಮಾಧಾನ ಮಾಡಲಾಗಿತ್ತಾದರೂ, ಅಲ್ಲೂ ಸಹ ಟಿಕೆಟ್ ನೀಡಲಿಲ್ಲ. ಇದೀಗ ಕಾಂಗ್ರೆಸ್ ನತ್ತ ಡಾ. ಸಂದೀಪ್ ಒಲವು ತೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











