Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಖರ ಬಿಸಿಲಿನಿಂದ ರಕ್ಷಣೆಗಾಗಿ ಮಾರ್ಗಸೂಚಿ ಬಿಡುಗಡೆ : ಏನು ಮಾಡಬೇಕು ? ಏನು ಮಾಡಬಾರದು ? ಇಲ್ಲಿದೆ ಮಾಹಿತಿ….!

Facebook
Twitter
Telegram
WhatsApp

ಚಿತ್ರದುರ್ಗ. ಏಪ್ರಿಲ್.2:  ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ಸಂಜೆ 03 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ವಿನಂತಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು, ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದಾರೆ.

ಹೆಚ್ಚು ನೀರು ಕುಡಿಯುವುದು:
ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‌ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.

ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.

ಇವುಗಳನ್ನು ಮಾಡಬಾರದು:
ಬಿಸಿಲಿನಲ್ಲಿ  ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.

ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.

ಸಾಮಾನ್ಯ ಅಪಾಯದ ಚಿಹ್ನೆಗಳು:
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.

ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್ ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!