ಚಿತ್ರದುರ್ಗ : ಏಪ್ರಿಲ್ 04 : ಭಾರತ ಚುನಾವಣಾ ಆಯೋಗವು ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೂವರು ಹಿರಿಯ ಶ್ರೇಣಿ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಈ ಚುನಾವಣೆಯ ಸಾಮಾನ್ಯ ವೀಕ್ಷಕರಾಗಿ ಹಿರಿಯ ಐಎಎಸ್. ಅಧಿಕಾರಿ ಮನೋಹರ ಮರಾಂಡಿ – ಮೊ.8951198644 ಹಾಗೂ ಶಾಂತಿ-ಸುವ್ಯವಸ್ಥೆಯ (ಪೊಲೀಸ್) ವೀಕ್ಷಕರಾಗಿ ಹಿರಿಯ ಪೊಲೀಸ್ ಅಧಿಕಾರಿ ನಜ್ಮುಲ್ ಹೊಡ – ಮೊ.9113093298 ಇವರುಗಳನ್ನು ಆಯೋಗವು ನಿಯೋಜಿಸಿದೆ.
ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿಗೆ ಸದರಿ ವೀಕ್ಷಕರನ್ನು ಅಥವಾ ಅವರ ಸಂಪರ್ಕಾಧಿಕಾರಿಗಳನ್ನು ಚಿತ್ರದುರ್ಗದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದಲ್ಲಿ ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














