Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರಳ, ಸಜ್ಜನ, ಅನುಭವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಜಿಲ್ಲೆಯ ಜನ ಗೆಲ್ಲಿಸುತ್ತಾರೆ : ಬಿ.ವೈ. ವಿಜಯೇಂದ್ರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ.04 : ಲೋಕಸಭೆ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಬಹಳ ಸರಳ, ಸಜ್ಜನ, ಪ್ರಾಮಾಣಿಕ, ಅನುಭವ ರಾಜಕಾರಣಿ ಇಂತಹ ಅಭ್ಯರ್ಥಿಯನ್ನು ಜಿಲ್ಲೆಯ ಜನ ಗೆಲ್ಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.

ಇಂದು ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ, ನಾಮಪತ್ರ ಸಲ್ಲಿಸಲು ತೆರಳುವ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ದೇಶದ ಜನ ಮತ್ತೊಮ್ಮೆ ಮೋದಿಜಿ ಅವರನ್ನು ಪ್ರಧಾನಮಂತ್ರಿ ಮಾಡಲು ಉತ್ಸುಕರಾಗಿದ್ದಾರೆ.ಹೀಗಾಗಿ ಅವರ ಜೊತೆಯಲ್ಲಿ ಗೋವಿಂದ ಕಾರಜೋಳ ಅವರು ಸಹ ಗೆದ್ದು ಅವರ ಜೊತೆ ಇರಬೇಕೆಂದು ನಮ್ಮ ಅಭಿಲಾಷೆ ಎಂದರು. ಯಡಿಯೂರಪ್ಪ ರಾಜಕಾರಣ ಬಿಡುವವರೆಗೂ ನಾನು ಹೋರಾಟ ನಡೆಸುತ್ತೇನೆ ಎಂದು ಹೇಳಿಕೆ ನೀಡಿರುವ ಈಶ್ವರಪ್ಪ ಹೇಳಿಕೆಗೆ ಅದನ್ನೆಲ್ಲ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ನಯವಾಗಿ ಉತ್ತರಿಸಿರು.

ನಂತರ, ಲೋಕಸಭಾ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ,ಇಂದು ಉರಿ ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ನಾಮಪತ್ರ ಸಲ್ಲಿಕೆಗೆ ಭಾಗವಹಿಸಿರುವುದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಅದೇ ರೀತಿ ಮುಂಬರುವ ದಿನಗಳಲ್ಲಿ, ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಬಿಜೆಪಿ ಪಕ್ಷದ ಆಡಳಿತದ ಬಗ್ಗೆ ತಿಳಿಸಿ ಅವರಿಗೆ ಬಿಜೆಪಿಗೆ ಮತ ಚಲಾಯಿಸುವಂತೆ ಮನವಿ ಮಾಡಬೇಕೆಂದು ಬಿಜೆಪಿ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್, ಶಾಸಕರಾದ ಎಂ ಚಂದ್ರಪ್ಪ, ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಎಸ್ ಕೆ ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ವೈ.ಎ ನಾರಾಯಣಸ್ವಾಮಿ, ಚಿದಾನಂದ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಹನುಮಂತೆ ಗೌಡ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಸಂಸದರಾದ ಜನಾರ್ಧನಸ್ವಾಮಿ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ, ಮುಂತಾದ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment