ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪವಿತ್ರ ನೇಮಕ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 05 : ಪವಿತ್ರ ಅವರನ್ನು ಚಿತ್ರದುರ್ಗ ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾನಂದಿನಿಗೌಡ ತಿಳಿಸಿದ್ದಾರೆ.

ಇವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ರವರ ಅನುಮೋದನೆ ಮತ್ತು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ರವರ ಸೂಚನೆಯ ಮೇರೆಗೆ ಹಾಗೂ ಶಾಸಕರಾದ ಕೆ.ಸಿ.ವಿರೇಂದ್ರಪಪ್ಪಿರವರ ಶಿಫಾರಸ್ಸಿನ ಮೇರೆಗೆ ಇವರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಿರಿಯರ ಮತ್ತು ಸ್ಥಳಿಯ ನಾಯಕರು ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

ಶ್ರೀಮತಿ ಪವಿತ್ರರವರು ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿಯಾಗಿ ಕೆಲಸವನ್ನು ಮಾಡಿದ ಅನುಭವ ಇದೆ, ಇದ್ದಲ್ಲದೆ ಈಡಿಗ ಸಮಾಜದ ಪದಾಧಿಕಾರಿಗಳಾಗಿದ್ದು, ಕಾರ್ಮಿಕ ಮತ್ತು ಅಹಿಂದ ಸಂಘಟನೆಯ ಹಾಲಿ ಜಿಲ್ಲಾಧ್ಯಕ್ಷರಾಗಿ, ವಾಸುದೇವ ಮೇಟಿ ಬಣದ ರೈತ ಸಂಘದ ಚಿತ್ರದುರ್ಗ ತಾಲ್ಲೂಕು ಸಂಘದ ಅಧ್ಯಕ್ಷರಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *