Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೋಷಿತ ವರ್ಗದಲ್ಲಿ ಜನಿಸಿ ದೇಶದ ಉಪ ಪ್ರಧಾನಿ ಹುದ್ದೆಯವರೆಗೆ ಏರಿದ ಮಹಾ ನಾಯಕ ಡಾ.ಬಾಬು ಜಗಜೀವನರಾಮ್‍ : ಬಿ.ಎನ್.ಚಂದ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.05  : ಶೋಷಿತ ವರ್ಗದಲ್ಲಿ ಜನಿಸಿದ ಡಾ.ಬಾಬು ಜಗಜೀವನರಾಮ್‍ರವರು ದೇಶದ ಉಪ ಪ್ರಧಾನಿ ಹುದ್ದೆಯವರೆಗೆ ಏರಿದರು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗುಣಗಾನ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಾಬುಜಗಜೀವನರಾಂರವರ 117 ನೇ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು ರಕ್ಷಣಾ ಸಚಿವರಾಗಿದ್ದಾಗ ದೇಶಕ್ಕೆ ಭದ್ರತೆ ಒದಗಿಸಿದ್ದರು. ಯಾವುದೇ ಖಾತೆ ನೀಡಿದರು ಸಮರ್ಥವಾಗಿ ನಿಭಾಯಿಸುತ್ತಿದ್ದರು. ಅವರಲ್ಲಿ ಅಷ್ಟೊಂದು ಪ್ರಾಮಾಣಿಕತೆ ದೇಶಭಕ್ತಿಯಿತ್ತು. ದೇಶದಲ್ಲಿ ಆಹಾರಕ್ಕೆ ಅಭಾವವಾದಾಗ ವಿದೇಶದಿಂದ ಕೆಂಪು ಜೋಳ ತರಿಸಿ ಬಡವರ ಹೊಟ್ಟೆ ತುಂಬಿಸಿದ ಮಹಾನ್ ಚೇತನ ಎಂದು ಹೇಳಿದರು.

ಜೈಜವಾನ್ ಜೈಕಿಸಾನ್ ಎನ್ನುವ ತತ್ವದಡಿ ರೈತರಿಗೆ ನೆರವಾಗಿ ನಿಂತ ಡಾ.ಬಾಬುಜಗಜೀವನರಾಂರವರನ್ನು ಎಲ್ಲರೂ ನೆನೆಯಲೇಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ. ಹತ್ತು ವರ್ಷಗಳ ಕಾಲ ಪ್ರಧಾನಿಯಾಗಿದ್ದ ನರೇಂದ್ರಮೋದಿ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬ ಬಡವರ ಬ್ಯಾಂಕ್ ಖಾತೆಗಳಿಗೆ ಹದಿನೈದು ಲಕ್ಷ ರೂ.ಗಳನ್ನು ಜಮ ಮಾಡುವುದಾಗಿ ಆಸೆ ಹುಟ್ಟಿಸಿದರು. ವರ್ಷಕ್ಕೆ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿ ಕೊನೆಗೆ ಪಕೋಡ ಮಾರಿ ಎಂದು ವ್ಯಂಗ್ಯವಾಡಿದರು. ಕೊಟ್ಟ ಮಾತಿನಂತೆ ನಡೆದುಕೊಳ್ಳದ ಬಿಜೆಪಿ.ಯನ್ನು ಈ ಬಾರಿಯ ಚುನಾವಣೆಯಲ್ಲಿ ಮತದಾರರು ಮನೆಗೆ ಕಳಿಸುತ್ತಾರೆಂದರು.ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಿಗೆ ಸೇರಿ ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...