ಚಿತ್ರದುರ್ಗ . ಏ.05: ನಗರದ ಕೆ.ಬಿ.ಬಡಾವಣೆಯ ಕಿಂಟೋ ಕಾನ್ವೆಂಟ್ ಕಿರಿಯ ಪ್ರಾಥಮಿಕ ಶಾಲೆ, ಕೋಟೆ ರಸ್ತೆಯ ಮಿನರ್ವ ಕಾನ್ವೆಂಟ್ ಪ್ರಾಥಮಿಕ ಶಾಲೆ, ಜೈನ್ ಕಾಲೋನಿಯ ಮಾಡಲ್ ಸೈನಿಕ್ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಳಪ್ಪನಹಟ್ಟಿಯ ಗುಡ್ ಷಫರ್ಡ್ ಶಾಲೆಗಳು ಮಾನ್ಯತೆ ಪಡೆಯದೇ ಅನಧಿಕೃತವಾಗಿ ಶಾಲೆ ಸ್ಥಳಾಂತರಿಸಿ ನಡೆಸುತ್ತಿವೆ. ಈ ಶಾಲೆಗಳಿಗೆ ಪ್ರಸಕ್ತ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹಾಗೂ ಮುಂದಿನ ಶೈಕ್ಷಣಿಕ ಸಾಲಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಬಾರದು.
ಯಾವುದೇ ಖಾಸಗಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮುನ್ನ ಶಾಲೆ ಮಾನ್ಯತೆ, ನವೀಕರಣ ಹಾಗೂ ಮಂಜೂರಾತಿ ಪಡೆದ ಸ್ಥಳದಲ್ಲಿಯೇ ನಡೆಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿದರೆ ಪೋಷಕರೇ ಹೊಣೆಗಾರರು ಎಂದು ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಎಚ್ಚರಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















