ಸುದ್ದಿಒನ್, ಚಿತ್ರದುರ್ಗ, ಏ.07: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ನಂ. 369 ರಲ್ಲಿ ಇಂದು (ಭಾನುವಾರ) ಬೆಳಿಗ್ಗೆ 4 ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರಿನಿಂದ ಚಿತ್ರದುರ್ಗ, ಹೊಳಲ್ಕೆರೆ, ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಬಸ್ ಹೊಳಲ್ಕೆರೆಯಿಂದ ಎರಡು ಕಿ.ಮೀ. ಸಮೀಪದ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಬಸ್‌ನಲ್ಲಿ 36 ಜನರು ಪ್ರಯಾಣಿಸುತ್ತಿದ್ದರು. 33 ಜನರು ಗಾಯಾಗೊಂಡಿದ್ದು, 18 ಮಂದಿ ಚಿತ್ರದುರ್ಗ ಜಿಲ್ಲಾ ಆ್ಪತ್ರೆಗೆ, 6 ಮಂದಿ ದಾವಣಗೆರೆಗೆ ಮತ್ತು 9 ಮಂದಿಯನ್ನು ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪೊಲೀಸ್ ಠಾಣೆಯ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












