ಉತ್ತಮ ರೀತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿ : ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸೂಚನೆ

1 Min Read

ಉತ್ತಮ ರೀತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿ :
ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಸೂಚನೆ

Conduct Elections in a Better Way: District Election Officer T. Venkatesh notice

 

ಚಿತ್ರದುರ್ಗ, ಏ.08: ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ತಮಗೆ ವಹಿಸಿದ ಚುನಾವಣಾ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಮತಗಟ್ಟೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ  ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಚುನಾವಣಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆ ಕೆಲಸ ಕಾರ್ಯಗಳ ಬಗ್ಗೆ ಯಾವುದೇ ಗೊಂದಲ ಇಲ್ಲದೆ, ತರಬೇತಿಯಲ್ಲಿ ತಮ್ಮ ಗೊಂದಲಗಳನ್ನು ಬಗೆಹರಿಸಿಕೊಂಡು ಮತಗಟ್ಟೆಗಳಿಗೆ ತೆರಳಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಸೆಕ್ಟರ್ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಇದ್ದರು.

ಅಂಚೆ ಮತದಾನ ಕೇಂದ್ರ ಸ್ಥಾಪನೆ :
ಏಪ್ರಿಲ್ 8 ರಿಂದ ಅನ್ವಯವಾಗುವಂತೆ ಅಂಚೆ ಮತದಾನ ಕೇಂದ್ರ (ಪೋಸ್ಟಲ್ ವೋಟಿಂಗ್ ಸೆಂಟರ್)ವನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಇದೇ ಏಪ್ರಿಲ್ 19 ರಿಂದ 21 ರ ವರೆಗೆ  ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್ ವೋಟಿಂಗ್ ಸೆಂಟರ್‍ಗೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *