ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗಾಗಿ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುತ್ತಿದೆ. ಆ ಎರಡು ಸಾವಿರ ರೂಪಾಯಿ ಎಷ್ಟೋ ಜನ ಮಹಿಳೆಯರಿಗೆ ಸಾಕಷ್ಟು ಅನುಕೂಲ ಮಾಡಿದೆ. ಹಾವೇರಿಯಲ್ಲಿ ಮಹಿಳೆಯೊಬ್ಬರು ಆ ಹಣ ಕೂಡಿಟ್ಟುಕೊಂಡು ಫ್ರಿಡ್ಜ್ ಖರೀದಿ ಮಾಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಡಿಕೆ ಶಿವಕುಮಾರ್ ಅವರ ಗಮನಕ್ಕೂ ಬಂದಿದ್ದು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ ಜನ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಅವರ ಬದುಕಿನ ಗುಣಮಟ್ಟ ಹೆಚ್ಚಿಸಿದ ಸಾರ್ಥಕತೆ ಸಾಕು ನಮಗೆ ಎಂದಿದ್ದಾರೆ.
2023ರ ಜುಲೈನಲ್ಲಿ ಗೃಹಲಕ್ಷ್ಮೀ ಯೋಜನೆ ಪ್ರಾರಂಭವಾಗಿತ್ತು. ಅಂದಿನಿಂದ ಬಂದಂತ ಹಣವನ್ನು ಕೂಡಿಟ್ಟುಕೊಂಡು ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಲತಾ ಎಂಬ ಗೃಹಿಣಿ ಫ್ರಿಡ್ಜ್ ತೆಗೆದುಕೊಂಡಿದ್ದಾರೆ. ಅದುವೇ 17,500 ರೂಪಾಯಿ ಆಗಿದೆ. ಹಬ್ಬದ ದಿನ ಈ ಫ್ರಿಡ್ಜ್ ಗೆ ಮನೆಯವರೆಲ್ಲಾ ಸೇರಿ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮಾತು ಕೊಟ್ಟಂತೆ ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿತ್ತು. ಅದರಲ್ಲಿ ಗೃಹಲಕ್ಷ್ಮೀಯೂ ಒಂದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











