ಕಲಬುರಗಿ: ಬಿಟ್ ಕಾಯಿನ್ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗ್ತಾ ಇದೆ. ಇದೀಗ ಈ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬಲಿ ಪಡೆಯೋದು 100% ಗ್ಯಾರಂಟಿ. ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲ ಈ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ವರಿಷ್ಠರ ಮಕ್ಕಳು ಕೂಡ ಭಾಗಿಯಾಗಿದ್ದಾರೆ.
ಬಿಟ್ ಕಾಯಿನ್ ಹಗರಣವನ್ನ ಮುಚ್ಚಿ ಹಾಕೋಕೆ ಬಹಳ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಬೆಂಗಳೂರು ಪೊಲೀಸರು ಕೂಡ ಬಿಟ್ ಕಾಯಿನ್ ಅಂದ್ರೆ ಕೈಮುಗಿದು ಕಳುಹಿಸುತ್ತಾರೆ. ಬಿಟ್ ಕಾಯಿನ್ ತನಿಖೆಯನ್ನ ಪೊಲೀಸರು ಯಾಕೆ ತಡಮಾಡ್ತಿದ್ದಾರೆ. ಕಳೆದ ಬಾರಿ ಬಿಜೆಪಿ ಅವಧಿಯಲ್ಲಿ ಸಿಎಂ ಕೊಟ್ಟಿದ್ದಾರೆ. ರಾಜಕಾರಣಿಗಳ ಜಾತಕ ಶ್ರೀಕಿ ಬಳಿ ಇದೆ ಎಂದು ಎಂದಿದ್ದಾರೆ.