ಸುದ್ದಿಒನ್, ಚಳ್ಳಕೆರೆ, ಏಪ್ರಿಲ್, 10 : ತಾಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ಜಿಲ್ಲೆಯಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ದಾಪುಗಾಲು ಇಡುತ್ತಾ ಗುಣಮಟ್ಟದ ಶಿಕ್ಷಣಕ್ಕೆ ಒಮ್ಮೆ ತಿರುಗಿ ನೋಡುವಂತೆ ಸಾಧನೆ ಮಾಡಿದೆ.
2023-24 ನೇ ಸಾಲಿನ ಪರೀಕ್ಷೆಗೆ ಒಟ್ಟು 97 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 97 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿರುವ ಮೂಲಕ ಶೇ .100%ಫಲಿತಾಂಶ ಕಾಲೇಜಿಗೆ ದೊರೆತರೆ, ಇದರಲ್ಲಿ 10 ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸುವುದರೊಂದಿಗೆ ಅತ್ಯುತ್ತಮ ಸಾಧನೆಯನ್ನು ತೋರಿದ್ದಾರೆ. ಹಾಗೂ ಒಟ್ಟು 52 ವಿದ್ಯಾರ್ಥಿಗಳು Distinction ನಲ್ಲಿ ಉತ್ತೀರ್ಣರಾದರೆ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ.
ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಶ್ರಮಿಸಿದಂತಹ ಉಪನ್ಯಾಸಕರು, ಪ್ರಾಂಶುಪಾಲರಿಗೆ ಸಂಸ್ಥೆಯ ಅಧ್ಯಕ್ಷರಾದ ಡಿ ಟಿ ರವೀಂದ್ರರವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











