Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ತತ್ತರ :  ಬಿ.ಎನ್.ಚಂದ್ರಪ್ಪ

Facebook
Twitter
Telegram
WhatsApp

ಸುದ್ದಿಒನ್, ಸಿರಿಗೆರೆ, ಏಪ್ರಿಲ್. 10 : ದೇಶದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆರೋಪಿಸಿದರು.

ನಗರದ ವಿವಿಧೆಡೆ ಬುಧವಾರ ಮತಯಾಚಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಜನಸಾಮಾನ್ಯರು ತತ್ತರಿಸಿದ್ದಾರೆ. ಸಿಲಿಂಡರ್ ಬಿಟ್ಟು, ಕಟ್ಟಿಗೆ ಹೊಲೆಗಳತ್ತ ಜನ ಗಮನಹರಿಸುತ್ತಿದ್ದಾರೆ. ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ನಿತ್ಯ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು.

ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಾಗಲೇ ರಾಜ್ಯದ ಮತದಾದರರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅದೆ ಮಾದರಿಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲ ಧರ್ಮಗ್ರಂಥಗಳ ಕುರಿತು ಗೌರವ ಇದೆ. ಆದರೆ, ಬಿಜೆಪಿ ನಾಯಕರಿಗೆ ಯಾವ ಧರ್ಮಗಳ ಗ್ರಂಥದ ಬಗ್ಗೆ ಗೌರವ ಇಲ್ಲ. ಭಗವದ್ಗೀತೆಗೆ ಕುರಿತು ಕೂಡ ಗೌರವ ಇಲ್ಲ ಎಂಬುದಕ್ಕೆ ಅವರು ನಡೆಸಿರುವ ಭ್ರಷ್ಟಾಚಾರ, ಗಲಭೆ, ಕೋಮುಧ್ವೇಷದ ಭಾಷಣವೇ ಸಾಕ್ಷಿ ಎಂದರು.

ಈಗಾಗಲೇ ಕ್ಷೇತ್ರದಲ್ಲಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕೆಂದು ಎಲ್ಲ ಸಮುದಾಯದವರು ಸ್ವಯಂ ಆಗಿ ಸಂಘಟನೆಯಲ್ಲಿ ತೊಡಗಿದ್ದಾರೆ. ಬಸವಣ್ಣನ ಆಶಯದಡಿ ರಚನೆಗೊಂಡಿರುವ ಸಂವಿಧಾನವನ್ನೇ ಬದಲು ಮಾಡಲು ಮುಂದಾಗಿರುವ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ನೋಟ್ ಬ್ಯಾನ್, ಜಿ.ಎಸ್.ಟಿ., ಬೆಲೆ ಏರಿಕೆ ಕಾರಣಕ್ಕೆ ಈಗಾಗಲೇ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಬರುವ ದಿನಗಳಲ್ಲಿ ನೆಮ್ಮದಿ ಜೀವನಕ್ಕೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಜನರೇ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮಾಜಿ ಸಚಿವ ಹೆಚ್. ಅಂಜನೇಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಲಿಂಗವ್ವನಾಗತಿಹಳ್ಳಿ ತೀಪ್ಪೇಸ್ವಾಮಿ ಬಸವರಾಜಯ್ಯ ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ತರಳಬಾಳು ಜಗದ್ಗುರು ಡಾ .ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯವರು ಯುಗಾದಿ ಹಬ್ಬದ ಶ್ರೀ ಮಠದ ಮುಂಭಾಗದಲ್ಲಿ ಚಂದ್ರ ದರ್ಶನ ಮಾಡುವ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಕಾಂಗ್ರೆಸ್ ಪಕ್ಷದ ಲೋಕ ಸಭಾ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಹಾಗೂ ಲಿಂಗವ್ವ ನಾಗತಿಹಳ್ಳಿ ತಿಪ್ಪೇಸ್ವಾಮಿ, ಬಸವರಾಜಯ್ಯ, ನಾಗರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಲಮ್ಮ ಬೈರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್, ತಾಲೂಕು ಕೆ.ಡಿ.ಪಿ ಸದಸ್ಯ ವಿಜಯ್ ಕುಮಾರ್, ಮುಂಬೈ ಮೂಲದ ಮಠದ ಭಕ್ತರಾದ ಅಸೀಮ್ ನಾಥ್ ಮುಖರ್ಜಿ ಕುಟುಂಬದವರು ಇನ್ನೂ ಮುಂತಾದ ಗ್ರಾಮಗಳ ಗ್ರಾಮಸ್ಥರು ಇದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!