Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

---Advertisement---

ಕಾರವಾರ : ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತಿತ್ತು. ಆದರೆ ಈಗ ಶಾಸಕ‌ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಬಲಿಗರೊಂದಿಗೆ ಸೇರ್ಪಡೆಯಾಗಿದ್ದಾರೆ. ವಿವೇಕ ಹೆಬ್ಬಾರ್‌ನ್ನ ಕಾಂಗ್ರೆಸ್ ಹಿರಿಯ ನಾಯಕ ಐವಾನ್ ಡಿಸೋಜಾ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿವೇಕ್ ಹೆಬ್ಬಾರ್, ಬಿಜೆಪಿಯಲ್ಲಿ ಹುದ್ದೆ ನೀಡುವಲ್ಲಿ ನಮ್ಮ ಕಾರ್ಯಕರ್ತರಿಗೆ ಆದಂತಹ ತಾರತಮ್ಯದಿಂದ ಪಕ್ಷ ತೊರೆದಿದ್ದೇವೆ. ಅದರಲ್ಲೂ ನಮ್ಮ ತಂದೆ ಶಾಸಕ ಹೆಬ್ಬಾರ್‌ರನ್ನ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿದ್ದವರೇ ಶಿವರಾಮ ಹೆಬ್ಬಾರನ್ನ ಸೋಲಿಸಲು ಪ್ರಯತ್ನಿಸಿದ್ದರು.

ಪ್ರಮುಖ ಹುದ್ದೆಯಲ್ಲಿದ್ದವರೇ ನಮ್ಮ ತಂದೆಯನ್ನ ಸೋಲಿಸಲು ಯತ್ನಿಸಿದ್ದರು. ಹಲವು ತಿಂಗಳ ಕಾಲ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನ ನಡೆಸಿದ್ದೇವೆ. ಯಾರ್ಯಾರಿಗೆ ದೂರು ಕೊಡಬೇಕು ಕೊಡುವ ಕೆಲಸ ಮಾಡಿದ್ದೇವೆ. ಆದರೆ ಅಂತಿಮವಾಗಿ ಈ ನಿರ್ಧಾರಕ್ಕೆ ಬರುವ ಅನಿವಾರ್ಯತೆ ಎದುರಾಯಿತು. ಕಾರ್ಯಕರ್ತರ ಒತ್ತಾಯದಂತೆ ಈ ನಿರ್ಧಾರ ಕೈಗೊಂಡಿದ್ದೇವೆ.

 

ಪುತ್ರನನ್ನ ಮೊದಲು ಸೇರ್ಪಡೆಗೊಳಿಸಿ ನಂತರ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗುವ ಚರ್ಚೆ ವಿಚಾರವಾಗಿ ಮಾತನಾಡಿ, ಕಾರ್ಯಕರ್ತರಿಗೆ ನ್ಯಾಯ ಕೊಡಬೇಕಾಗಿತ್ತು, ಅವರ ಭಾವನೆಗಳಿಗೆ ಬೆಲೆ‌ ಕೊಡುವ ಉದ್ದೇಶದಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment