Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 11 : ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸಿನ ಬಳಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಕಾರು ಗುದ್ದಿದ  ರಭಸಕ್ಕೆ ಬೈಕ್ ಸವಾರನಾದ ಕೋನಿಗರಹಳ್ಳಿ ಗ್ರಾಮದ ಮಹಾಂತೇಶ ಎಂಬುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪತ್ನಿಯೊಂದಿಗೆ  ಕೋನಿಗರಹಳ್ಳಿ ಗ್ರಾಮದಿಂದ ಹೆಗ್ಗೆರೆ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದ್ದು ಪತ್ನಿ  ಪ್ರೇಮಾ  ಅವರಿಗೆ ಕೈಗೆ ತೀವ್ರವಾಗಿ ಪೆಟ್ಟಾಗಿದೆ.  ಕಾರಿನಲ್ಲಿ ಇದ್ದ ಮೂವರಿಗೆ ಗಾಯಗಳಾಗಿದ್ದು  ಚಿಕಿತ್ಸೆಗಾಗಿ ಇವರನ್ನು ಹತ್ತಿರದ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...