ಟಿವಿಯಲ್ಲಿ ಮೊಟ್ಟಮೊದಲ ಬಾರಿಗೆ ಜ್ಯೋತಿಷ್ಯ ಶುರು ಮಾಡಿದ್ದ ಎಸ್.ಕೆ. ಜೈನ್ ನಿಧನ

suddionenews
1 Min Read

ಬೆಂಗಳೂರು: ಕರ್ನಾಟಕದ ಮೊಟ್ಟ ಮೊದಲ ಜ್ಯೋತಿಷಿ ಎಂದು ಖ್ಯಾತಿ ಪಡೆದಿದ್ದ ಎಸ್ ಕೆ ಜೈನ್ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜೈನ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಪತ್ನಿ ಮತ್ತು ಮಕ್ಕಳು ಅಗಲಿದ್ದಾರೆ.

ಇವರ ತಂದೆ ಬಿ ಜಿ ಶಶಿಕಾಂತ್ ಜೈನ್ ಹೆಸರಾಂತ ಜ್ಯೋತಿಷಿಗಳಾಗಿದ್ದವರು. ಜ್ಯೋತಿರ್ವಿದ್ಯೆಯಲ್ಲಿ ಇಡೀ ದೇಶದಲ್ಲಿ ಹೆಸರು ಮಾಡಿದ್ದ ದಿವಂಗತ ಬಿ ಜಿ ಶಶಿಕಾಂತ್ ಜೈನ್ ರ ಪುತ್ರ ಎಸ್ ಕೆ ಜೈನ್ ಮೊದಲಿಗೆ ಇಂಜಿನಿಯರ್ ಆಗಬೇಕೆಂದುಕೊಂಡವರು. ಆದರೆ ಅದನ್ನ ಕೈಬಿಟ್ಟು ತಂದೆಯ ಬಳಿಯಲ್ಲಿ ಜ್ಯೋತಿಷ್ಯವನ್ನೇ ರೂಢಿಸಿಕೊಂಡರು. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು.

ಬಳಿಕ ಖಾಸಗಿ ವಾಹಿನಿಯಲ್ಲೂ ಜ್ಯೋತಿಷ್ಯ ಶಾಸ್ತ್ರವನ್ನು ಹೇಳುತ್ತಿದ್ದರು. ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು. ಆದರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *