ಶಿವಮೊಗ್ಗ: ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದಾನೇ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಗೀತಾ ಶಿವರಾಜ್ಕುಮಾರ್, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮಧು ಬಂಗಾರಪ್ಪ, ಶಿವಣ್ಣ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಅವಘಡವೂ ಸಂಭವಿಸಿದೆ. ನಾಮ ಪತ್ರ ಸಲ್ಲಿಕೆಗೆ ರ್ಯಾಲಿ ಮೂಲಕ ತೆರಳಲಾಗಿದೆ. ಈ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಬಿದ್ದು, ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಖಾಸಗಿ ನ್ಯೂಸ್ ಚಾನೆಲ್ ನ ರಿಪೋರ್ಟರ್ ಒಬ್ಬರಿಗೂ ಗಾಯವಾಗಿದೆ. ಮಹಿಳೆ ಸೇರಿದಂತೆ ಒಟ್ಟು ನಾಲ್ವರಿಗೆ ಇದರಿಂದ ತೊಂದರೆಯಾಗಿದೆ.
ದೊಡ್ಡ ಗಾತ್ರದ ಎಲ್ಇಡಿ ಬೋರ್ಡ್ ಏಕಾಏಕಿ ಬಿದ್ದಿದೆ. ಇದರಿಂದ ಮೆರವಣಿಗೆಗೆ ಆಗಮಿಸಿದ ವ್ಯಕ್ತಿಗೆ ತೀವ್ರವಾದ ಪೆಟ್ಟಾಗಿದೆ. ಒಬ್ಬ ವ್ಯಕ್ತಿ ತಲೆಗೆ ಜೋರು ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಎಲ್ಇಡಿ ಅಳವಡಿಕೆ ಮಾಡದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ನಡೆಸಿದ್ದಾರೆ. ಈ ಬಾರಿ ಗೀತಾ ಗೆಲ್ಲುವ ವಿಶ್ವಾಸವನ್ನು ಶಿವಣ್ಣ ವ್ಯಕ್ತಪಡಿಸಿದ್ದಾರೆ. ಅದಕ್ಕೆಂದೆ ಶೂಟಿಂಗ್ ಮುಂದೂಡಿ, ಪತ್ನಿಯ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










