Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ಧಾರೂಢ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ

---Advertisement---

ಹುಬ್ಬಳ್ಳಿ: ಇಂದು ರಾಜ್ಯಾದ್ಯಂತ ಶ್ರೀರಾಮನವಮಿಯ ಸಂಭ್ರಮ ಮನೆ ಮಾಡಿದೆ. ಇದರ ಜೊತೆಗೆ ಇಂದು ಹುಬ್ಬಳ್ಳಿಯ ಸಿದ್ದಾರೂಢ ಸ್ವಾಮೀಜಿಗಳ ಹುಟ್ಟುಹಬ್ಬ ಕೂಡ. ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳ 188ನೇ ಹುಟ್ಟುಹಬ್ಬ. ಈ ಸುಸಂದರ್ಭಕ್ಕೆ ಪ್ರಧಾನಿ ಮೋದಿ ಅವರು ಶುಭಕೋರಿದ್ದಾರೆ.

‘ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ, ಸಾಮರಸ್ಯ ಮತ್ತು ವಂಚಿತರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳಿಗೆ ಸ್ಮರಿಸಲಾಗುತ್ತದೆ. ಶ್ರೀ ಸಿದ್ಧಾರೂಢ ಸ್ವಮೀಜಿ ಅವರ ಜೀವನ ಮತ್ತು ಕಾರ್ಯಗಳು ಎಲ್ಲ ಜೀವಿಗಳ ಕಲ್ಯಾಣಕ್ಕೆ ಗಾಢವಾದ ಬದ್ಧತೆಗೆ ನಿದರ್ಶನವಾಗಿವೆ. ಅವರು ಯಾವಾಗಲೂ ಏಕತೆ ಮತ್ತು ದಯೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಸದಾ ಶ್ರಮಿಸುತ್ತೇವೆ’ ಎಂದು ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

ಶ್ರೀ ಸಿದ್ಧಾರೂಢರು 6 ವರ್ಷದವರಿದ್ದಾಗಲೇ ಮನೆಯನ್ನು ತೊರೆದು ದೇಶ ಸಂಚಾರಕ್ಕೆ ಹೊರಟರು. ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಗುರುಗಳಾದ ಪೂಜ್ಯಶ್ರೀ ಗಜದಂಡ ಶಿವಯೋಗಿಗಳು ಶ್ರೀ ಸಿದ್ಧಾರೂಢರಿಗೆ ಸಿದ್ಧಾರೂಢ ಭಾರತಿ ಎಂದು ನಾಮಕರಣ ಮಾಡಿದರು. ಮುಂದೆ ಶ್ರೀ ಸಿದ್ಧಾರೂಢರು ಹುಬ್ಬಳ್ಳಿಗೆ ಬಂದು ನೆಲಸಿದರು. ಹುಬ್ಬಳ್ಳಿಯಲ್ಲಿ ಮಠವನ್ನು ಕಟ್ಟಿ ನಿತ್ಯ ಮಠಕ್ಕೆ ಬರುವ ಭಕ್ತರಿಗೆ ಪ್ರವಚ ಹೇಳುತ್ತಾ ಅಧ್ಯಾತ್ಮದ ಪಥಕ್ಕೆ ಹಚ್ಚಿದರು. ಶ್ರೀ ಸಿದ್ಧಾರೂಢರು ಪವಾಡ ಪುರುಷರಾಗಿದ್ದು, ಇಂದಿಗೂ ಕೂಡ ಮಠದಲ್ಲಿ ಪವಾಡಗಳು ನಡೆಯುತ್ತವೆ ಎಂಬುವುದು ಭಕ್ತರ ನಂಬಿಕೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...