Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ವಿತರಣೆ | ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ಹನ್ನೆರಡನೆ ವಾರ್ಡ್ ಅಗಸನಕಲ್ಲು ಫಾತಿಮ ಮಸೀದಿ ಸಮೀಪ ಕೇಂದ್ರ ಸರ್ಕಾರದ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸಲಾಯಿತು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ವಿತರಿಸಿ ಮಾತನಾಡುತ್ತ ಕಾಂಗ್ರೆಸ್‍ಗೆ  ತ್ಯಾಗ ಬಲಿದಾನಗಳ ಇತಿಹಾಸವಿದೆ. ಕೋಮುವಾದಿ ಬಿಜೆಪಿಯಲ್ಲಿ ಯಾರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿಲ್ಲ. ಇಂದಿರಾಗಾಂಧಿ ರಾಜೀವ್‍ಗಾಂಧಿ ಇವರುಗಳು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ನೆಹರು ಕುಟುಂಬದ ಕುಡಿ ರಾಹುಲ್‍ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಜನತೆಗೆ ನೀಡಿದೆ. ಅದೇ ರೀತಿ ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರೆಂಟಿಗಳನ್ನು ನೀಡುವುದಾಗಿ ಘೋಷಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರಳ, ಸಜ್ಜನ, ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಮಹಿಳೆಯರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹನುಮಲಿ ಷಣ್ಮುಖಪ್ಪ, ಕೆಡಿಪಿ. ಸದಸ್ಯ ಕೆ.ಸಿ.ನಾಗರಾಜ್, ಪರಮೇಶ್ ಇವರುಗಳು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment